ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ: ಸಿಎಂ ಸಿದ್ದರಾಮಯ್ಯ

Update: 2024-02-18 09:03 GMT

̤

 ಮಂಡ್ಯ, ಫೆ 18: ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಭಾನುವಾರ ಮಳವಳ್ಳಿಯಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನ ಈ ಬಾರಿ ಕಾಂಗ್ರೆಸ್ಸಿಗೆ ಆಶೀರ್ವಾದ ಮಾಡುತ್ತಿದ್ದಾರೆ ಎಂದು ಬಿಜೆಪಿಯವರಿಗೆ ತಿಳಿದಿದೆ. ಅದಕ್ಕೆ ಬಿಜೆಪಿಯವರು 28 ಕ್ಕೆ 28 ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದರು.

ಚಿತ್ರ ನಟ ಡಾಲಿ ಧನಂಜಯ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪಕ್ಷದಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ ಇದರ ಬಗ್ಗೆ ನನಗೆ ಗೊತ್ತೂ ಇಲ್ಲ. ಸ್ಥಳೀಯವಾಗಿ ಶಾಸಕರು, ಜಿಲ್ಲಾ ಬ್ಲಾಕ್ ಸಮಿತಿ ಅಧ್ಯಕ್ಷರು, ಮುಖಂಡರು ಯಾರನ್ನು ಸೂಚಿಸುತ್ತಾರೋ ಅವರಿಗೆ ಲೋಕಸಭಾ ಚುನಾವಣೆ ಸ್ಪರ್ಧಿಸಲು ಟಿಕೆಟ್ ನೀಡುವುದಾಗಿ ಹೇಳಿದರು. 

ಈಗ ವಿರೋಧ ಪಕ್ಷ ಅಂತ ಇರೋದು ಒಂದೇ. ಜೆಡಿಎಸ್ ಒಂದು ಪ್ರತ್ಯೇಕ ಪಕ್ಷ ವಾಗಿ ಕೆಲಸ ಮಾಡುತ್ತಿಲ್ಲ. ಬಿಜೆಪಿಯೊಂದಿಗೆ ವಿಲೀನವಾಗಿದ್ದು, ಅವರೊಂದಿಗೆ  ಸೇರಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದರು.

ಬಜೆಟ್ ಬಗೆಗಿನ ಬಿಜೆಪಿಯ ಟೀಕೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾವು ಬಡವರ ಪರವಾಗಿ ಕಾರ್ಯಕ್ರಮಗಳನ್ನು ನೀಡಿರುವುದು. ಬಡವರ ವಿರೋಧಿ ಬಿಜೆಪಿಗೆ ಬಜೆಟ್ ಅರ್ಥವಾಗೋಲ್ಲ.  ಎಂದರು.

ಕೇಂದ್ರದಿಂದ 1.87 ಲಕ್ಷ ಕೋಟಿ ರೂ.ಗಳು ನಮಗೆ ನಷ್ಟವಾಗಿದೆ. ಆ ಅನುದಾನ ಬಂದರೆ ಇನ್ನೂ ಹೆಚ್ಚು ಕಾರ್ಯಕ್ರಮಗಳನ್ನು ರಾಜ್ಯಕ್ಕೆ ಕೊಡಬಹುದು. ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿಗಳು ಮಾತ್ರವಲ್ಲದೆ ಮೂಲಸೌಕರ್ಯ ಅಭಿವೃದ್ಧಿ, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೂ ಒತ್ತು ನೀಡುವ ಕೆಲಸ ಮಾಡಿದ್ದೇವೆ ಎಂದರು.

 ಮುಖ್ಯಮಂತ್ರಿಯಾದ ನಂತರ ಮಳವಳ್ಳಿಗೆ ಮೊದಲ ಬಾರಿ ಆಗಮಿಸುತ್ತಿದ್ದು, ಇಲ್ಲಿ ಸಮರ್ಥವಾದ ಮುಖಂಡರು ಮತ್ತು ಶಾಸಕರಿರುವುದರಿಂದ ಪದೇ ಪದೇ ಬರಬೇಕಾದ ಅಗತ್ಯವಿಲ್ಲ. ಜಿಲ್ಲಾ ಮಂತ್ರಿಗಳೂ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News