ನಾವು ಜಾತಿ ಸಮೀಕ್ಷೆಗೆ ವಿರೋಧ ಮಾಡಿಲ್ಲ: ಬಸವರಾಜ ಬೊಮ್ಮಾಯಿ

Update: 2023-10-04 15:17 GMT

ಬಸವರಾಜ ಬೊಮ್ಮಾಯಿ

ಬೆಂಗಳೂರು: ನಾವು ಜಾತಿ ಸಮೀಕ್ಷೆಗೆ ವಿರೋಧ ಮಾಡಿಲ್ಲ. ರಾಜ್ಯ ಸರಕಾರ ಸಾಮಾಜಿಕ, ಆರ್ಥಿಕ ಸಮೀಕ್ಷೆ ಮಾಡಿಸಿದ್ದು, ಅದು ಜಾತಿ ಗಣತಿ ಅಲ್ಲ ಅಂತ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಉತ್ತರ ಭಾರತದ ಜಾತಿ ಸಮೀಕರಣಕ್ಕೂ ದಕ್ಷಿಣ ಭಾರತದ ಜಾತಿ ಸಮಿಕರಣಕ್ಕೂ ವ್ಯತ್ಯಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರದಿಯಿಂದ ತುಳಿತಕ್ಕೊಳಗಾದವರಿಗೆ ನ್ಯಾಯ ಒದಗಿಸುವ ಜವಾಬ್ದಾರಿ ಸರಕಾರಕ್ಕೆ ಇದೆ. ಈ ವರದಿಯಲ್ಲಿ ಏನಿದೆ ಅಂತ ಗೊತ್ತಿಲ್ಲ. ಈಗಾಗಲೆ ವರದಿ ಸೋರಿಕೆ ಆಗಿದೆ ಅಂತ ಆರೋಪ ಇದೆ. ವರದಿ ಬಂದ ಮೇಲೆ ನೋಡೊಣ ಎಂದರು.

ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿದ್ದಾಗಲೆ ವರದಿ ಸ್ವೀಕಾರ ಮಾಡಬಹುದಿತ್ತು. ಆದರೆ ಆಗ ಚುನಾವಣೆ ಬಂತು ಅಂತ ಜಾರಿ ಮಾಡಿಲ್ಲ. ಈಗ ಏನು ಮಾಡುತ್ತಾರೊ ನೋಡೋಣ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯ ಸರಕಾರ ಒಂದು ಸಮುದಾಯದ ಓಲೈಕೆ ರಾಜಕಾರಣ ಮಾಡುತ್ತಿರುವುದರಿಂದ ಶಿವಮೊಗ್ಗದ ಗಲಭೆಗೆ ಪ್ರೇರಣೆಯಾಗಿದ್ದು, ತಪ್ಪಿತಸ್ಥರು ಯಾರೆ ಇರಲಿ ಅವರನ್ನು ಹಿಡಿದು ಒಳಗೆ ಹಾಕುವ ಬದಲು ಸಚಿವರು ಅವರಿಗೆ ಕ್ಲೀನ್ ಚಿಟ್ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಬಿಜೆಪಿಯವರು ಗಲಭೆ ಮಾಡಿಸುತ್ತಿದ್ದಾರೆಂದು ಸಚಿವರೆ ದಾರಿ ತಪ್ಪಿಸುತ್ತಿದ್ದಾರೆ. ಯಾರು ಕ್ರಮ ಕೈಗೊಳ್ಳಬೇಕೊ ಅವರೇ ಹೀಗೆ ಹೇಳಿದರೆ ಸರಕಾರದ ಮೆಲೆ ಜನ ಭರವಸೆ ಇಡುವುದು ಹೇಗೆ ? ಗೃಹ ಸಚಿವರು ಇದು ಸಣ್ಣ ಘಟನೆ ಅಂತ ಹೇಳಿದ್ದಾರೆ. ಈ ಸರಕಾರದ ತುಷ್ಟೀಕರಣದ ನೀತಿಯೆ ಸಮಾಜ ಘಾತುಕ ಶಕ್ತಿಗಳು ಹೆಚ್ಚಾಗಲು ಕಾರಣವಾಗಿದೆ ಎಂದು ಬಸವರಾಜ ಬೊಮ್ಮಾಯಿ ಟೀಕಿಸಿದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News