‘ಕಾವೇರಿಗಾಗಿ ನಾವು ಪ್ರಾಣ ಕೊಡೋಕೆ ಸಿದ್ಧʼ: ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್

Update: 2023-10-01 13:08 GMT

ಬೆಂಗಳೂರು, ಅ.1: ‘ಕಾವೇರಿಗೆ ನಾವು ಪ್ರಾಣ ಕೊಡೋಕೆ ಸಿದ್ಧ' ಎಂದು ಚಿತ್ರ ನಟ ನೆನಪಿರಲಿ ಪ್ರೇಮ್ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆಯುವ ಮೂಲಕ ಗಮನ ಸೆಳೆದಿದ್ದಾರೆ.

ಸಾಮಾಜಿಕ ಜಾಲತಾಣವಾದ ಇನ್‍ಸ್ಟಾಗ್ರಾಮ್‍ನಲ್ಲಿ ರಕ್ತದಲ್ಲಿ ಪತ್ರ ಬರೆದಿರುವ ವಿಡಿಯೋವನ್ನು ಹಂಚಿಕೊಂಡಿರುವ ಅವರು, ಕಾವೇರಿ ವಿಚಾರವಾಗಿ ರಾಜ್ಯಕ್ಕೆ ನ್ಯಾಯ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

‘ಕಾವೇರಿ, ಕರ್ನಾಟಕಕ್ಕೆ ದಯವಿಟ್ಟು ನ್ಯಾಯ ಕೊಡಿ. ಕಾವೇರಿ ನಮ್ಮದು’ ಎಂದು ಅವರು ಉಲ್ಲೇಖಿಸಿದ್ದು, ‘ಸಿದ್ಧ ಕಣೋ ಪ್ರಾಣ ಕೊಡೋಕೆ, ಈ ಜಲ ನೆಲ ನಾಡು ನುಡಿಗೆ’ ಎಂದು ಅಡಿಬರಹ ನೀಡಿದ್ದಾರೆ. ಹಾಗೆಯೇ ಆ ಪತ್ರದಲ್ಲಿ ಅವರ ಹಸ್ತದ ಅಚ್ಚನ್ನು ರಕ್ತದಲ್ಲಿ ನಮೂದಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News