ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡಲು ಸಿಎಂ ಅನುಮೋದನೆ: ಸಚಿವ ಮಧು ಬಂಗಾರಪ್ಪ

Update: 2023-07-11 08:07 GMT

ಸಾಂದರ್ಭಿಕ ಚಿತ್ರ

ಬೆಂಗಳೂರು: 'ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡಲು ನಿರ್ಧರಿಸಲಾಗಿದೆ' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ''ವಾರಕ್ಕೆ 2 ಮೊಟ್ಟೆ  ಕೊಡುವ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿಕೊಂಡಿದ್ದೆ. ಅದರಂತೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿ ವಾರಕ್ಕೆ 2 ಮೊಟ್ಟೆ ನೀಡಲು ಅನುಮೋದಿಸಿದ್ದಾರೆ'' ಎಂದು ತಿಳಿಸಿದರು. 

''ಮೊಟ್ಟೆ ವಿತರಣೆ ಹಾಗೂ ಶೂ- ಸಾಕ್ಸ್ ವಿಚಾರದಕಲ್ಲಿ ಎಸ್​ಡಿಎಮ್​ಸಿ ಅವರಿಗೆ ಎಲ್ಲ ಅಧಿಕಾರ ಕೊಡಲಾಗಿದೆ. 280 ಕೋಟಿ ರೂ. ಈ ಮೊಟ್ಟೆ ನೀಡಲು ಸದ್ಯ ಯೋಜನೆ ರೂಪಿಸಲಾಗಿದೆ. ವಾರ್ಷಿಕವಾಗಿ 84 ದಿನ ಮಕ್ಕಳಿಗೆ ಮೊಟ್ಟೆ ಕೊಡಲಾಗುತ್ತದೆ. ಮೊಟ್ಟೆ ತಿನ್ನದೇ ಇರುವವರಿಗೆ ಚಿಕ್ಕಿ ಮತ್ತು ಬಾಳೆ ಹಣ್ಣು ಕೊಡುವ ವ್ಯವಸ್ಥೆ ಮಾಡಲಾಗಿದೆ. ಗುಣಮಟ್ಟ ಚೆನ್ನಾಗಿಲ್ಲ ಎಂದರೆ ಎಸ್​ಡಿಎಮ್​ಸಿ ಅವರೇ ಜವಾಬ್ದಾರಿ'' ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News