ವಿಧಾನಸಭೆ ಕಲಾಪದಲ್ಲಿ ವ್ಯಕ್ತಿಯೊಬ್ಬ ಬಂದು ಕೂತಿದ್ದನ್ನು ಏನೆಂದು ಕರೆಯಬೇಕು?: ಕುಮಾರಸ್ವಾಮಿ

Update: 2023-12-21 13:59 GMT

ಹೊಸದಿಲ್ಲಿ: ‘ಸಂಸತ್ ಭವನದಲ್ಲಿ ಯುವಕರು ಹೊಗೆ ಬಿಟ್ಟ ಪ್ರಕರಣವನ್ನೇ ದೊಡ್ಡದು ಮಾಡಿ ಕಾಂಗ್ರೆಸ್ ಪಕ್ಷ ಸಂಸತ್ ಕಲಾಪವನ್ನು ಹಾಳು ಮಾಡುತ್ತಿರುವುದು ಸರಿಯಲ್ಲ. ಈ ವಿಚಾರದಲ್ಲಿ ವಿಪಕ್ಷಗಳ ನಡೆ ಸರಿ ಇಲ್ಲ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಗುರುವಾರ ದಿಲ್ಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ನಾನು ಕೇಳಬಯಸುತ್ತೇನೆ, ಸಂಸತ್ ಘಟನೆಯನ್ನೆ ಭದ್ರತಾ ವೈಫಲ್ಯ ಎನ್ನುವುದಾದರೆ ವಿಧಾನಸಭೆ ಅಧಿವೇಶನದ ವೇಳೆ ಒಬ್ಬ ವ್ಯಕ್ತಿ ಸದನದ ಒಳಕ್ಕೆ ಬಂದು ಒಂದೂವರೆ ಗಂಟೆ ಕಲಾಪದಲ್ಲಿ ಭಾಗಿಯಾಗಿದ್ದ. ಅದನ್ನು ಏನೆಂದು ಕರೆಯಬೇಕು ಎಂದು ಖಾರವಾಗಿ ಪ್ರಶ್ನಿಸಿದರು.

‘ಈ ವೈಫಲ್ಯದ ಬಗ್ಗೆ ಯಾಕೆ ಚರ್ಚೆ ಮಾಡುತ್ತಿಲ್ಲ ಕಾಂಗ್ರೆಸ್ಸಿಗರು?, ಇದೇ ವಿಧಾನಸಭೆಯ ಕಳೆದ ಕಲಾಪದಲ್ಲಿ ಸಭಾಧ್ಯಕ್ಷರ ಮೇಲೆ ಪೇಪರ್ ಎಸೆದರು ಎಂದು ವಿಪಕ್ಷಗಳ ಶಾಸಕರನ್ನು ಸದನದಿಂದ ಹೊರ ಹಾಕಿದ್ದರು. ಅದನ್ನು ಏನೆಂದು ಕರೆಯುತ್ತಾರೆ? ಅದು ಯಾವ ರಾಜಕೀಯ? ಒಬ್ಬ ದಲಿತ ಉಪಾಧ್ಯಕ್ಷರು ಅಂಥ ಹೇಳಿ ಶಾಸಕರನ್ನು ಸದನದಿಂದ ಹೊರ ಹಾಕಿದ್ದರು ಕರ್ನಾಟಕದಲ್ಲಿಇದರ ಬಗ್ಗೆ ಯಾಕೆ ಪ್ರಶ್ನೆ ಮಾಡುತ್ತಿಲ್ಲ ಖರ್ಗೆಯವರೇ ಎಂದು ಅವರು ಟೀಕಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News