ಪ್ರಭಾಕರ್ ಭಟ್, ಅನಂತಕುಮಾರ್ ಹೆಗಡೆ ವಿರುದ್ಧ ಕ್ರಮಕ್ಕೆ ಹಿಂದೇಟು ಏಕೆ?: ಬಿ.ಕೆ.ಹರಿಪ್ರಸಾದ್
ಬೆಂಗಳೂರು: ಮಹಿಳಾ ಸಮುದಾಯವನ್ನೆ ಅಪಮಾನಿಸುವಂತಹ ಹೇಳಿಕೆ ನೀಡಿದ್ದ ಆರೆಸ್ಸೆಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಪರಿಷತ್ತಿನ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆ ಮುಖ್ಯಮಂತ್ರಿಗಳನ್ನು ನಿಂದಿಸಿರುವುದು ಮಾತ್ರವಲ್ಲದೆ, ಮಸೀದಿಗಳನ್ನು ಹೊಡೆದು ಹಾಕಬೇಕು ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಕೋರ್ಟಿನ ಆದೇಶದ ಪ್ರಕಾರ ಪ್ರಚೋದನಾಕಾರಿ ಹೇಳಿಕೆ ನೀಡಿದವರ ವಿರುದ್ಧ ತಕ್ಷಣ ಎಫ್‍ಐಆರ್ ದಾಖಲಿಸಿ ಬಂಧಿಸಬೇಕು. ಆದರೆ ಅವರ ವಿರುದ್ಧ ಯಾವುದೇ ಕ್ರಮಗಳಾಗುವುದಿಲ್ಲ ಎಂದರು.
ಮತ್ತೊಂದೆಡೆ, ಕಲ್ಲಡ್ಕ ಪ್ರಭಾಕರ್ ಭಟ್ ಜಾಮೀನು ಪಡೆದುಕೊಳ್ಳುತ್ತಾರೆ, ಸಂಸದರು ಏನು ಮಾಡಿದ್ದಾರೆ ಗೊತ್ತಿಲ್ಲ. ಅಲ್ಲದೆ, ನಾನು ಪಕ್ಷದಲ್ಲಿ ಇಷ್ಟು ವರ್ಷ ಸೇವೆ ಸಲ್ಲಿಸಿದ್ದೇನೆ. ಇಂದು ನನ್ನನ್ನು ವಿಚಾರಣೆ ಮಾಡಲು ಪೊಲೀಸರನ್ನು ಕಳುಹಿಸುತ್ತಾರೆಂದರೆ ಮುಂದಿನ ದಿನಗಳಲ್ಲಿ ಏನಾಗಲಿದೆ ಎಂದು ಕಾದು ನೋಡೋಣ ಎಂದು ಬೇಸರ ವ್ಯಕ್ತಪಡಿಸಿದರು.