ಮುಂದಿನ 7 ದಿನ ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ವ್ಯಾಪಕ ಮಳೆ ಸಾಧ್ಯತೆ : ಹವಾಮಾನ ಇಲಾಖೆ

Update: 2024-10-12 16:18 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ಮುಂದಿನ 7 ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ವ್ಯಾಪಕ ಮಳೆಯಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಪೂರ್ವ ಅರಬ್ಬೀ ಸಮುದ್ರ ತೀರದಲ್ಲಿ ತೀವ್ರವಾಗಿ ವಾಯುಭಾರ ಕುಸಿತವಾಗಿದ್ದು, 5.8 ಕಿ.ಮೀ ಎತ್ತರದ ವರೆಗೆ ಗಾಳಿ ಪರಿಚಲನೆ ಇದೆ. ಬಂಗಾಲ ಉಪಸಾಗರದ ಆಗ್ನೇಯ ಭಾಗದಲ್ಲೂ ಗಾಳಿಯ ಪರಿಚಲನೆ 5.8 ಎತ್ತರವಿದೆ. ಪರಿಣಾಮ ಅಕ್ಟೋಬರ್ 14ರಂದು ತೀವ್ರವಾಗಿ ವಾಯುಭಾರ ಕುಸಿತ ಸಾಧ್ಯತೆ ಇದೆ.

ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗಬಹುದು. ಅ.16ರಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ 16 ರಿಂದ 18ರವರೆಗೆ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮಳೆ: ಶನಿವಾರ ಮಧ್ಯಾಹ್ನದಿಂದಲೇ ನಗರದ ರಿಚ್‍ಮಂಡ್ ವೃತ್ತ, ಶಾಂತಿನಗರ, ಆಡುಗೋಡಿ, ಕೆ.ಆರ್. ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News