‘ಲೋಕಸಭಾ ಚುನಾವಣೆ’: ರಾಹುಲ್ ಗಾಂಧಿ ಸೂಚನೆಗೆ ಬದ್ಧ ಎಂದ ಡಾ.ಜಿ.ಪರಮೇಶ್ವರ್

Update: 2024-06-08 18:26 GMT

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಯಾವ್ಯಾವ ಜಿಲ್ಲೆಗಳಲ್ಲಿ ಹಿನ್ನಡೆಯಾಗಿದೆ ಎಂದು ವಿಶ್ಲೇಷಣೆ ಮಾಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ ನೀಡಿದ್ದು, ಅವರ ಸೂಚನೆಗೆ ಬದ್ಧವಾಗಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಶನಿವಾರ ಸದಾಶಿವನಗರದಲ್ಲಿನ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಿನ್ನೆ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ ಸ್ವಾಭಾವಿಕವಾಗಿ ಎಲ್ಲ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದು, ನಾನು ಪ್ರತಿನಿಧಿಸುವ ತುಮಕೂರು ಸೇರಿಸಿ ಯಾವೆಲ್ಲಾ ಜಿಲ್ಲೆಗಳಲ್ಲಿ ಹಿನ್ನಡೆಯಾಗಿದೆ ಎಂದು ವಿಶ್ಲೇಷಣೆ ಮಾಡಲು ಹೇಳಿದ್ದಾರೆ ಎಂದರು.

‘ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿನ ಭ್ರಷ್ಟಾಚಾರ ಪ್ರಕರಣದಲ್ಲಿ ತನಿಖೆ ನಡೆಯುತ್ತಿರುವ ವೇಳೆ ಅನೇಕ ವಿಚಾರ ಬರುತ್ತವೆ. ಅಪರಾಧಿ ಸ್ಥಾನದಲ್ಲಿ ಇರುವವರು ತನಿಖೆ ವೇಳೆ ಹಲವು ಹೇಳಿಕೆಗಳನ್ನು ಕೊಡುತ್ತಾರೆ. ಆ ಹೇಳಿಕೆಯಲ್ಲಿ ಹಲವರ ಹೆಸರು ಬರುತ್ತದೆ. ಅದನ್ನು ಎಸ್‍ಐಟಿ ತನಿಖೆ ಮಾಡುತ್ತಾರೆ. ನಾವು ಅದರ ಬಗ್ಗೆ ವ್ಯಾಖ್ಯಾನ ಮಾಡುವುದು ಸರಿಯಲ್ಲ ಎಂದು ಅವರು ಆಕ್ಷೇಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News