ಸೇಡಂನಲ್ಲಿ ನಡೆಯಲಿರುವ ʼಭಾರತ ವಿಕಾಸ ಸಂಗಮʼ ಸಮಾವೇಶದಲ್ಲಿ ಭಾಗವಹಿಸಲ್ಲ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಗುಲ್ಬರ್ಗಾದ ಸೇಡಂನಲ್ಲಿ ಸಂಘ ಪರಿವಾರದ ಕೆ.ಏನ್. ಗೋವಿಂದಾಚಾರ್ಯನವರ ಅವರು ಸ್ಥಾಪಿಸಿರುವ ಭಾರತ ವಿಕಾಸ ಸಂಗಮ ಎಂಬ ಸಂಸ್ಥೆಯು ನಡೆಸುತ್ತಿರುವ ಭಾರತೀಯ ಸಂಸ್ಕೃತಿ ಉತ್ಸವ -7 ಎಂಬ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ ಎಂಬ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರಲು ತೀರ್ಮಾನಿಸಿದ್ದೇನೆ ಎಂದು ಹೇಳಿದ್ದಾರೆ.
ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, "ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ. ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ. ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು ತೀರ್ಮಾನಿಸಿದ್ದೇನೆ." ಎಂದು ಹೇಳಿದ್ದಾರೆ.