ರಾಮಮಂದಿರ ಉದ್ಘಾಟನೆ ಬಳಿಕ ಅಯೋಧ್ಯೆಗೆ ಭೇಟಿ ನೀಡುತ್ತೇನೆ: ಸಿಎಂ ಸಿದ್ದರಾಮಯ್ಯ

Update: 2024-01-12 09:19 GMT

ಶಿವಮೊಗ್ಗ: ಜನವರಿ 22 ರ ಉದ್ಘಾಟನೆ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ. ದೇವರನ್ನು ರಾಜಕೀಯವಾಗಿ ಬಿಜೆಪಿ ಬಳಸಿಕೊಳ್ಳುವುದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀ ರಾಮಚಂದ್ರನನ್ನು ವಿರೋಧಿಸುವುದಿಲ್ಲ. 22 ನೇ ತಾರೀಖಿನ ನಂತರ ಅಯೋಧ್ಯೆಗೆ ಭೇಟಿ ನೀಡುತ್ತೇನೆ. ಇಡೀ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ಕೂಡ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡುತ್ತಾರೆ ಎಂದರು.

ಕುಮಾರಸ್ವಾಮಿ ಅಂದರೆ ಸುಳ್ಳು, ಸುಳ್ಳು ಎಂದರೆ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳ ಬಗ್ಗೆ ಯಾರದ್ದೋ ದುಡ್ಡು, ಯಲ್ಲಮ್ಮನ ಜಾತ್ರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು , ಕುಮಾರಸ್ವಾಮಿ ಅಂದರೆ ಸುಳ್ಳು, ಸುಳ್ಳು ಎಂದರೆ ಕುಮಾರಸ್ವಾಮಿ. ಅವರ ಟೀಕೆಗೆ ನಾನು ಉತ್ತರಿಸುವುದಿಲ್ಲ ಎಂದರು.

ನುಂಗಲಾರದ ತುತ್ತು

ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷ ನಾಯಕರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಪಕ್ಷಗಳು ತಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ಗ್ಯಾರಂಟಿಗಳನ್ನು ನೀಡಿಲ್ಲವಾದ್ದರಿಂದ ಅವರಿಗೆ ಈ ಯೋಜನೆಗಳು ನುಂಗಲಾರದ ತುತ್ತಾಗಿವೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News