ಡಿ.10ಕ್ಕೆ 454 ಪೊಲೀಸ್ ಕಾನ್ಸ್ ಸ್ಟೇಬಲ್ (ಸಿವಿಲ್) ಹುದ್ದೆಗಳಿಗೆ ಲಿಖಿತ ಪರೀಕ್ಷೆ

Update: 2023-11-27 17:48 GMT

ಸಾಂದರ್ಭಿಕ ಚಿತ್ರ 

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್ ಕಾನ್ಸ್ ಸ್ಟೇಬಲ್(ಸಿವಿಲ್) (ಪುರುಷ ಮತ್ತು ಮಹಿಳಾ, ತೃತೀಯ ಲಿಂಗಿಗಳು)ಹಾಗೂ ಸೇವಾನಿರತ ಹಾಗೂ ಬ್ಯಾಕ್‍ಲಾಗ್ 454 ಹುದ್ದೆಗಳಿಗೆ ಡಿ.10ರ ಬೆಳಗ್ಗೆ 11ರಿಂದ 12.30ರ ವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ ನಗರ, ಕಲಬುರಗಿ ಜಿಲ್ಲೆ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ ಎಂದು ಬೆಂಗಳೂರು ಪೊಲೀಸ್ ನೇಮಕಾತಿ ವಿಭಾಗ ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News