ಯಾದಗಿರಿ | ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದು 10 ತಿಂಗಳ ಮಗುವಿಗೆ ಗಾಯ

Update: 2023-08-11 18:10 GMT

ಯಾದಗಿರಿ, ಆ.11: ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ 10 ತಿಂಗಳ ಮಗುವಿಗೆ ಗಾಯಗೊಂಡಿರುವ ಘಟನೆ ಗುರುವಾರ ಯಾದಗಿರಿ ಜಿಲ್ಲೆಯ ಮರಕಲ್ ಗ್ರಾಮದಲ್ಲಿ ವರದಿಯಾಗಿದೆ.

ಅಂಗನವಾಡಿ ಕೇಂದ್ರದಲ್ಲಿ ಶಿಶುಗಳಿಗೆ ಇಂದ್ರಧನುಷ್ ಲಸಿಕೆ ಹಾಕುವ ಕಾರ್ಯಕ್ರಮವನ್ನು ಅಧಿಕಾರಿಗಳು ಆಯೋಜಿಸಿದ್ದರು. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಕ್ಕೆ ಲಸಿಕೆ ಹಾಕಿಸಲು ಮಗುವಿನ ಜೊತೆ ಕುಟುಂಬಸ್ಥರು ಆಗಮಿಸಿದ್ದರು. ಈ ವೇಳೆ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದಿದೆ ಎನ್ನಲಾಗಿದೆ.

ಅಧಿಕಾರಿಗಳ ಭೇಟಿ,  ಗ್ರಾಮಸ್ಥರ ಆಕ್ರೋಶ

ಘಟನೆ ಬಳಿಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮೂರು ವರ್ಷಗಳ ಹಿಂದೆ ಕಟ್ಟಡ ನಿರ್ಮಾಣವಾಗಿದ್ದು, ಕಳಪೆ ಕಾಮಗಾರಿಯಿಂದ ಘಟನೆ ನಡೆದಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News