ಯತ್ನಾಳ್ ಹೇಳಿಕೆಗಳನ್ನು ಹೈಕಮಾಂಡ್ ಗಮನಿಸುತ್ತಿದೆ : ಪ್ರಹ್ಲಾದ್ ಜೋಶಿ

Update: 2024-10-02 12:18 GMT

 ಪ್ರಹ್ಲಾದ್ ಜೋಶಿ

ಬೆಂಗಳೂರು : ವಿಜಯಪುರ ಕ್ಷೇತ್ರದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗಳನ್ನು ಬಿಜೆಪಿ ಹೈಕಮಾಂಡ್, ರಾಷ್ಟ್ರೀಯ ನಾಯಕರ ಗಮನಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯತ್ನಾಳ್ ಪಕ್ಷದ ನೀತಿ-ನಿರೂಪಣೆಗೆ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಪಕ್ಷದ ವೇದಿಕೆಯಲ್ಲೇ ಎಲ್ಲವನ್ನೂ ಚರ್ಚಿಸಬೇಕು. ಯಾರೂ ಬಹಿರಂಗ ಹೇಳಿಕೆ ಕೊಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.


Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News