ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Update: 2024-10-09 15:33 GMT

ಸಾಂದರ್ಭಿಕ ಚಿತ್ರ 

ಬೆಂಗಳೂರು: ರಾಜ್ಯದ 12 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿರುವ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಉಳಿದ ಕಡೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಮುಂದಿನ 24 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೈಸೂರು, ಮಂಡ್ಯ, ಹಾಸನ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿಯಲ್ಲಿ ಸಾಧಾರಣ ಮಳೆಯಾಗಲಿದೆ. ಬಹುತೇಕ ಕಡೆ ಒಣಹವೆ ಇರಲಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News