ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​

Update: 2025-04-04 17:06 IST
ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​

ವಿನಯ್ ಕುಲಕರ್ಣಿ

  • whatsapp icon

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಫಿ ಸಾಕ್ಷಿಯಾಗಿಸಿದ್ದನ್ನು ಪ್ರಶ್ನಿಸಿ ಶಾಸಕ, ಆರೋಪಿ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿ ಆದೇಶಿಸಿದೆ.

ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಬಸವರಾಜ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿಸಲಾಗಿದೆ. ಇದನ್ನು  ಪ್ರಶ್ನಿಸಿ ಆರೋಪಿ ವಿನಯ್ ಕುಲಕರ್ಣಿ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. 

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ, ನಾಲ್ಕು ವಾರಗಳಲ್ಲಿ ಟ್ರಯಲ್ ಪೂರ್ಣಗೊಳಿಸಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೂಚನೆ ನೀಡಿ, ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಅಲ್ಲದೆ, ಯೋಗೇಶ್ ಗೌಡ ಪತ್ನಿ ಮಲ್ಲವ್ವ ಸಲ್ಲಿಸಿದ್ದ ಅರ್ಜಿಯನ್ನೂ ವಜಾಗೊಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News