ನೇಜಾರಿನಲ್ಲಿ ನಡೆದ ಸರಣಿ ಹತ್ಯೆ ಪ್ರಕರಣ ಮಾನವೀಯ ಸಮಾಜವನ್ನು ಬೆಚ್ಚಿ ಬೀಳಿಸಿದೆ
ಕಾರ್ಕಳ : ಉಡುಪಿಯ ನೇಜಾರಿನಲ್ಲಿ ನಡೆದ ಸರಣಿ ಹತ್ಯೆ ಪ್ರಕರಣವು ಮಾನವೀಯ ಸಮಾಜವನ್ನು ಬೆಚ್ಚಿ ಬೀಳಿಸಿದಂತಾಗಿದೆ ಎಂದು ಫೆಡರೇಷನ್ ಆಫ್ ಸ್ಟೋನ್ ಮತ್ತು ಕ್ರಷರ್ ಮಾಲಕರ ಸಂಘದ ರಾಜ್ಯಾಧ್ಯಕ್ಷರಾದ ರವೀಂದ್ರ ಶೆಟ್ಟಿಯವರು ತಿಳಿಸಿದ್ದಾರೆ.
ಇಂತಹ ಘಟನೆಗಳು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತವೆ. ಈ ನಿಟ್ಟಿನಲ್ಲಿ ಪೊಲೀಸರು ಕಠಿಣ ಕ್ರಮಗಳನ್ನು ಕೈ ಗೊಳ್ಳಬೇಕು. ಕರ್ನಾಟಕ ರಾಜ್ಯದಲ್ಲಿ ಹೊರ ರಾಜ್ಯಗಳಿಂದ ಬಂದವರ ಬಗ್ಗೆ ತೀವ್ರ ನಿಗಾ ಇಡಬೇಕು ಎಂದ ಅವರು ಹಲವಾರು ಮಂದಿ ನಕಲಿ ಆಧಾರ್ ಮೂಲಕ ರಾಜ್ಯ ಪ್ರವೇಶ ಮಾಡಿದ್ದಾರೆ. ಇದು ರಾಜ್ಯದ ಹಿತ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.
ಡ್ರಗ್ಸ್ ಸೇವನೆಯಿಂದಾಗಿ ಇಂತಹ ಕ್ರೂರ ಕೃತ್ಯಗಳು ಸೃಷ್ಟಿಯಾಗುತ್ತಿವೆ. ಡ್ರಗ್ಸ್ ಸೇವನೆ ಬಳಿಕ ಅಪರಾಧಿ ಕೃತ್ಯಗಳು ನಡೆಯುತ್ತಿರುವುದು ಹಲವಾರು ಕಡೆಗಳಲ್ಲಿ ಕಂಡು ಬಂದಿದೆ. ಇಂತಹ ಸಮಾಜ ಘಾತುಕ ಶಕ್ತಿಗಳನ್ನು ಮಟ್ಟ ಹಾಕಲು ನಮ್ಮ ಆಡಳಿತ ವ್ಯವಸ್ಥೆ ಹಾಗೂ ಪೊಲೀಸ್ ಇಲಾಖೆ ತಕ್ಷಣ ಕಾರ್ಯ ಪ್ರವೃತ್ತರಾಗಬೇಕು. ನೇಜಾರಿನಲ್ಲಿ ಕೊಲೆಯಾದ ಆ ಮನೆಯವರಿಗೆ ಸಾಂತ್ವನ ಹೇಳಿದ ಅವರು ಇಂತಹ ಘಟನೆಗಳನ್ನು ನಾಗರಿಕ ಸಮಾಜದ ಯಾರು ಕೂಡಾ ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಸಮಾಜ ಘಾತುಕರು ಯಾರೇ ಇರಲಿ. ಅವರೆಲ್ಲರನ್ನು ಪೊಲೀಸ್ ಇಲಾಖೆ ಹೆಡಮುರಿ ಕಟ್ಟಲಿ ಎಂದು ಅವರು ತಿಳಿಸಿದ್ದಾರೆ