ಉಳ್ಳಾಲ: ಗಾಳಿ, ಮಳೆಗೆ ಕುಸಿದು ಬಿದ್ದ ಶಾಲಾ ಕಟ್ಟಡದ ಛಾವಣಿ

Update: 2023-07-06 09:23 GMT

ಉಳ್ಳಾಲ,ಜು.6: ಕಳೆದ ಮೂರು ದಿನಗಳಿಂದ ನಿರಂತರ ಸುರಿಯುತ್ತಿರುವ ಗಾಳಿ,ಮಳೆಗೆ ತಲಪಾಡಿ,ದೇವಿನಗರದ ಶಾರದಾ ವಿದ್ಯಾಲಯದ ಆರು ಅಂತಸ್ತಿನ ಕಟ್ಟಡದ ಮೇಲೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಛಾವಣಿಯೆ ಹಾರಿ ಕೆಳಗೆ ಬಿದ್ದಿರುವ ಘಟನೆ ವರದಿಯಾಗಿದೆ.

ಬುಧವಾರ ಬೆಳಿಗ್ಗೆ ಸುಮಾರು 9 ಗಂಟೆ ವೇಳೆಗೆ ಘಟನೆ ನಡೆದಿದೆ ಎನ್ನಲಾಗಿದ್ದು, ದೇವಿನಗರದ ಶಾರದಾ ವಿದ್ಯಾಲಯದ ಕ್ಯಾಂಪಸ್ ಒಳಗಿನ ಆರು ಅಂತಸ್ತಿನ ಶಾಲಾ ಕಟ್ಟಡದ ಮೇಲೆ ಇತ್ತೀಚಿಗೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಛಾವಣಿ ಉರುಳಿ ಕೆಳಗೆ ಬಿದ್ದಿದೆ ಎಂದು ತಿಳಿದು ಬಂದಿದೆ.

ಶೀಟ್ ಅಳವಡಿಸಲು ಹಾಕಲಾಗಿದ್ದ ಭಾರೀ ಗಾತ್ರದ ಕಬ್ಬಿಣದ ಸಲಾಕೆಗಳು ಕೆಳಗೆ ಉರುಳಿ ಬಿದ್ದು ವಾಹನಗಳು ಜಖಂ ಗೊಂಡಿವೆ.ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಕಳೆದೆರಡು ದಿವಸಗಳಿಂದ ಜಿಲ್ಲಾಡಳಿತವು ಶಾಲಾ,ಕಾಲೇಜುಗಳಿಗೆ ರಜೆ ನೀಡಿದ್ದರಿಂದ ವಿದ್ಯಾರ್ಥಿಗಳು ಶಾಲೆಗೆ ಬಂದಿರಲಿಲ್ಲ. ಹಾಗಾಗಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಶಾಲಾಡಳಿತವು ಕ್ರೇನ್ ಮೂಲಕ ಶೀಟ್ ,ಕಬ್ಬಿಣದ ಸಲಾಕೆಗಳನ್ನು ತೆರವುಗೊಳಿಸಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News