ಮಿತ್ತೂರು: ಕಾರು- ಟಿಪ್ಪರ್ ಢಿಕ್ಕಿ; ನಾಲ್ವರು ಗಂಭೀರ

Update: 2023-07-25 07:44 GMT

ವಿಟ್ಲ: ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಪ್ರಯಾಣಿಕರನ್ನು ಮುಂಬೈ ಮೂಲದವರೆಂದು ಗುರುತಿಸಲಾಗಿದೆ. ಮಂಗಳೂರುನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ.ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News