ಮಾಜಿ ಸಚಿವ ವಿನಯ ಕುಮಾರ್ ಸೊರಕೆ ತಾಯಿ ನಿಧನ
Update: 2023-07-08 05:25 GMT
ಪುತ್ತೂರು: ಮಾಜಿ ನಗರಾಭಿವೃದ್ಧ ಸಚಿವ ವಿನಯ ಕುಮಾರ್ ಸೊರಕೆ ಅವರ ತಾಯಿ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಸೊರಕೆ ನಿವಾಸಿ ದಿ. ಅಚ್ಚುತ ಪೂಜಾರಿ ಅವರ ಪತ್ನಿ ಸುನೀತಿ(92) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪುತ್ರರಾದ ಕೃಷಿಕ ಅಶೋಕ್ ಕುಮಾರ್ ಸೊರಕೆ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮುಂಡೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ, ಪುತ್ರಿ ಶಶಿಕಲಾ ಶರತ್ ಮತ್ತು ಎಂಟು ಮೊಮ್ಮಕ್ಕಳು ಹಾಗೂ ಮೂವರು ಮರಿ ಮಕ್ಕಳನ್ನು ಅಗಲಿದ್ದಾರೆ.
ಅಂತ್ಯ ಸಂಸ್ಕಾರ ಇಂದು ಮದ್ಯಾಹ್ನ 1.30 ರ ನಂತರ ಸ್ವಗೃಹವಾದ ಪುತ್ತೂರು ತಾಲೂಕಿನ ಸರ್ವೇ ಗ್ರಾಮದ ಸೊರಕೆ ಯಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.