ನಮ್ಮ ಸರ್ಕಾರದ ವತಿಯಿಂದ ಉಚಿತ ಮಾನಸಿಕ ಚಿಕಿತ್ಸೆಯ ಯೋಜನೆ ರೂಪಿಸಬೇಕಾದೀತು: ಕಾಂಗ್ರೆಸ್

Update: 2023-06-23 10:38 GMT

ಬೆಂಗಳೂರು: ಬಿಜೆಪಿ ನಾಯಕರ ಇತ್ತೀಚಿನ ಹೇಳಿಕೆಗಳ ಬಗ್ಗೆ ಕಾಂಗ್ರೆಸ್ ವ್ಯಂಗ್ಯಾತ್ಮಕವಾಗಿ ಪ್ರತಿಕ್ರಿಯಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿಗರ ಇತ್ತೀಚಿನ ಮಾತು ಕೃತಿ ಗಮನಿಸಿದರೆ ನಮ್ಮ ಸರ್ಕಾರ ಉಚಿತ ಮಾನಸಿಕ ಚಿಕಿತ್ಸೆಯ ಯೋಜನೆಯನ್ನೂ ರೂಪಿಸಬೇಕಾದೀತು ಎಂದು ಹೇಳಿದೆ.

ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿಗೆ ಕಾರಣನಾದ ನಾಮಕಾವಸ್ಥೆ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕನಿಷ್ಠ ಕಾಮನ್ ಸೆನ್ಸ್ ಇಲ್ಲ, ಇನ್ನು ಸಂಸದೀಯ ನಿಯಮಗಳ ಬಗ್ಗೆ ಅರಿವಿರಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದೆ.

ಪ್ರಿಯಾಂಕ್ ಖರ್ಗೆ ಅವರು ಕಲಬುರ್ಗಿಯ ಉಸ್ತುವಾರಿ ಸಚಿವರು, ಅಲ್ಲಿನ ವ್ಯವಸ್ಥೆಯನ್ನು ಸರಿಪಡಿಸುವುದು ಅವರ ಹೊಣೆಗಾರಿಕೆ, ಅಲ್ಲಿನ ಅಧಿಕಾರಿಗಳನ್ನು ಸರಿದಾರಿಗೆ ತರುವುದು ಅವರದ್ದೇ ಜವಾಬ್ದಾರಿ. ಇಷ್ಟು ಸಾಮಾನ್ಯ ತಿಳುವಳಿಕೆ ಇಲ್ಲದಿರುವುದಕ್ಕಾಗಿಯೇ ಕಟೀಲ್ ಅವರನ್ನು "ಕಾಮಿಡಿ ಕಿಲಾಡಿ" ಎನ್ನುವುದು ಎಂದು ಟೀಕಿಸಿದೆ.

ಕಟೀಲ್ ಅವರೇ, ತಾವು ಅಧ್ಯಕ್ಷಗಿರಿಯನ್ನು ಬಿಎಲ್ ಸಂತೋಷ್ ಅವರ ಪಾದರಕ್ಷೆಗಳಿಗೆ ಲೀಸ್ ಗೆ ಕೊಟ್ಟಿದ್ದೀರಿ ಎಂದ ಮಾತ್ರಕ್ಕೆ ಬೇರೆಲ್ಲರೂ ಹಾಗೆಯೇ ಎಂದು ತಿಳಿಯುವುದು ಮೂರ್ಖತನ ಎಂದು ಟ್ವೀಟ್ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News