ಜುಲೈ 2 ರಂದು ಭಾರತೀಯ ಸೇನಾ ನೇಮಕಾತಿ ಅಭ್ಯರ್ಥಿಗಳಿಗೆ ವಿದ್ಯಾಮಾತಾ ಅಕಾಡಮಿ ವತಿಯಿಂದ ಉಚಿತ ತರಬೇತಿ

Update: 2023-06-28 09:32 GMT

Photo: PTI (ಸಾಂದರ್ಭಿಕ ಚಿತ್ರ)

ಪುತ್ತೂರು: ವಿದ್ಯಾಮಾತ ಅಕಾಡಮಿ ವತಿಯಿಂದ ಭಾರತೀಯ ಸೇನಾ ನೇಮಕಾತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಉಚಿತ ದೈಹಿಕ ಸದೃಡತೆಯ ಮೈದಾನ ತರಬೇತಿಯು ಜುಲೈ. 2ರಂದು ಬೆಳಗ್ಗೆ 9 ಗಂಟೆಯಿಂದ ಮದ್ಯಾಹ್ನ 12 ಗಂಟೆಯ ತನಕ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಕಾಡಮಿಯ ಅಧ್ಯಕ್ಷ ಭಾಗ್ಯೇಶ್ ರೈ ತಿಳಿಸಿದ್ದಾರೆ.

ಪುತ್ತೂರು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾಮಾತ ಅಕಾಡಮಿ ಹಾಗೂ ನಿವೃತ್ತ ಸೈನಿಕಕರ ಸಂಘ ದ.ಕ.ಜಿಲ್ಲೆ ಮತ್ತು ಪುತ್ತೂರು ತಾಲೂಕು ಘಟಕ ಇವುಗಳ ಸಹಯೋಗದಲ್ಲಿ ಈ ತರಬೇತಿಯನ್ನು ನಡೆಸಲಾಗುತ್ತಿದೆ. ಅಗ್ನಿಪಥ್ ಮತ್ತು ವಿವಿಧ ಸೇನಾ ನೇಮಕಾತಿಗಳಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ತರಬೇತಿಯಲ್ಲಿ ಭಾಗವಹಿಸಲು ಅವಕಾಶವಿದೆ. ಏರ್ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್, ಕರ್ನಲ್ ಶರತ್ ಭಂಡಾರಿ, ನಿವೃತ್ತ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ತರಬೇತಿಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅವರು ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ನಿವೃತ್ತ ಸೈನಿಕ ಕಾಂಚೋಡು ಗೋಪಾಲ ಕೃಷ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ನಿವೃತ್ತ ಸೈನಿಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ರಾಮಚಂದ್ರ ಪುಚೇರಿ, ಕಾರ್ಯದರ್ಶಿ ನಾಗಪ್ಪ ಗೌಡ, ವಿದ್ಯಾಮಾತಾ ಫೌಂಡೇಶನ್ ಅಧ್ಯಕ್ಷ್ ಪ್ರವೀಣ್ ಶೆಟ್ಟಿ ಅಳಕೆಮಜಲು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News