ಚಿರತೆ ದಾಳಿಗೆ ತುತ್ತಾಗಿದ್ದ ಬಾಲಕಿ ಸಾವು

Update: 2023-07-15 04:58 GMT

ಚಾಮರಾಜನಗರ : ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಗ್ಗಲಿ ಗುಂದಿ ಗ್ರಾಮದ ಬಾಲಕಿ ಸುಶೀಲ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ.

ಜೂ.26ರ ರಾತ್ರಿ ತಮ್ಮ ಮನೆ ಬಳಿ ಚಿರತೆ ದಾಳಿಗೆ ಸಿಲುಕಿದ್ದ ಬಾಲಕಿಯನ್ನು ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.



Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News