ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಜಾಮೀನು ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ್

Update: 2023-07-01 12:08 IST
ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಜಾಮೀನು ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ್

ತೀಸ್ತಾ ಸೆಟಲ್ವಾಡ್, Photo: PTI

  • whatsapp icon

ಅಹಮದಾಬಾದ್: 2002ರ ಗುಜರಾತ್ ದಂಗೆಗೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಮುಂಬೈ ಮೂಲದ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರ ವಿರುದ್ಧ ಸಲ್ಲಿಸಲಾದ ಆರೋಪಪಟ್ಟಿಗೆ ಸಂಬಂಧಿಸಿದಂತೆ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ. "ಕೂಡಲೇ ಶರಣಾಗುವಂತೆ" ನ್ಯಾಯಾಲಯವು ಸೆಟಲ್ವಾಡ್ ಗೆ ಸೂಚಿಸಿದೆ ಎಂದು Indian Express ವರದಿ ಮಾಡಿದೆ.

ಸೆಪ್ಟೆಂಬರ್ 2022 ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ಮಧ್ಯಂತರ ಜಾಮೀನಿನ ಮೂಲಕ ಸೆಟಲ್ವಾಡ್ ಅವರ ಬಂಧನದಿಂದ ರಕ್ಷಣೆ ನೀಡಲಾಗಿತ್ತು.

ನ್ಯಾಯಮೂರ್ತಿ ನಿರ್ಜಾರ್ ದೇಸಾಯಿ ಅವರ ತೀರ್ಪಿನ ನಂತರ, ಹಿರಿಯ ವಕೀಲ ಮಿಹಿರ್ ಠಾಕೋರ್ ಅವರು ತೀರ್ಪಿನ ಕಾರ್ಯಾಚರಣೆಯನ್ನು 30 ದಿನಗಳ ಅವಧಿಗೆ ತಡೆಹಿಡಿಯುವಂತೆ ನ್ಯಾಯಾಲಯವನ್ನು ಕೋರಿದರು. ಆದರೆ, ಈ ಮನವಿಯನ್ನು ನ್ಯಾಯಮೂರ್ತಿ ದೇಸಾಯಿ ತಿರಸ್ಕರಿಸಿದ್ದಾರೆ.

2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಅಮಾಯಕರನ್ನು ತಪ್ಪಾಗಿ ಸಿಲುಕಿಸಲು ಸಂಚು ರೂಪಿಸಿದ ಆರೋಪದ ಮೇಲೆ ಅಹಮದಾಬಾದ್ ಡಿಟೆಕ್ಷನ್ ಆಫ್ ಕ್ರೈಮ್ ಬ್ರಾಂಚ್ (ಡಿಸಿಬಿ) ದಾಖಲಿಸಿದ ಎಫ್ಐಆರ್ ಆಧರಿಸಿ ಗುಜರಾತ್ ಪೊಲೀಸರು ಜೂನ್ 25, 2022 ರಂದು ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಿದ್ದರು. ಸೆಟಲ್ವಾಡ್ ಅವರನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿತ್ತು ಹಾಗೂ ಜುಲೈ 2 ರಂದು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.

.

Tags:    

Writer - ವಾರ್ತಾಭಾರತಿ

contributor

Editor - Sathish

contributor

Byline - ವಾರ್ತಾಭಾರತಿ

contributor

Similar News