ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ; ಸೆಮಿಸ್ಟರ್ ಪರೀಕ್ಷೆ ಮುಂದೂಡದ ಮಂಗಳೂರು ವಿವಿ, ಸಂಕಷ್ಟದಲ್ಲಿ ವಿದ್ಯಾರ್ಥಿಗಳು

Update: 2023-07-24 09:49 GMT

ಸುಬ್ರಹ್ಮಣ್ಯ: ಭಾರೀ ಮಳೆ ಮುಂದುವರಿದಿದ್ದು, ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದ್ದು ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಸ್ಥಿತಿ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ಮಂಗಳೂರು ಯುನಿವರ್ಸಿಟಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಮಳೆ ಕಾರಣ ಪರೀಕ್ಷೆ ಮುಂದೂಡಿಕೆಯಾಗದ ಹಿನ್ನೆಲೆಯಲ್ಲಿ ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿಗೆ ಪರೀಕ್ಷೆ ಹಾಜರಾಗಲು ಬರುವ ವಿದ್ಯಾರ್ಥಿಗಳು ಜಲಾವೃತಗೊಂಡ ರಸ್ತೆಯಲ್ಲೇ ಸಂಚರಿಸಿ ಪರೀಕ್ಷಾ ಕೇಂದ್ರಗಳತ್ತ ಬಂದಿದ್ದಾರೆ ಎಂದು ತಿಳಿದು ಬಂದಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ವಿಶ್ವವಿದ್ಯಾನಿಲಯ ಸೆಮಿಸ್ಟರ್ ಪರೀಕ್ಷೆ ಮುಂದೂಡಲಿ ಎಂಬ ಆಗ್ರಹ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಬೆಳಗ್ಗೆ ಹಾಗೂ ಮಧ್ಯಾಹ್ನ ಪರೀಕ್ಷೆಗಳು ನಡೆಯುತ್ತಿದ್ದು, ಕೊಡಗು ಜಿಲ್ಲೆಯಲ್ಲಿ ಸೆಮಿಸ್ಟರ್ ಪರೀಕ್ಷೆ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News