ಗಣರಾಜ್ಯೋತ್ಸವ ; ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Update: 2025-01-26 10:35 IST
Narendra Modi, Draupadi Murmu

ನರೇಂದ್ರ ಮೋದಿ , ದ್ರೌಪದಿ ಮುರ್ಮು 

  • whatsapp icon

ಹೊಸದಿಲ್ಲಿ : 76ನೇ ಗಣರಾಜ್ಯೋತ್ಸವದ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಿಲ್ಲಿಯ ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಸಾಥ್‌ ನೀಡಿದ್ದಾರೆ. ಸಮಾರಂಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ.

ಗಣರಾಜ್ಯೋತ್ಸವದ ಹಿನ್ನೆಲೆ ರಾಷ್ಟ್ರ ರಾಜಧಾನಿ ಹೈ ಅಲರ್ಟ್‌ ಆಗಿದೆ. ದಿಲ್ಲಿಯಾದ್ಯಂತ 70,000ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಕರ್ತವ್ಯ ಪಥದಲ್ಲಿ ಸಾಗುತ್ತಿರುವ ಮೆರವಣಿಗೆ ವೀಕ್ಷಿಸಲು ವಿವಿಧ ಕ್ಷೇತ್ರಗಳ ಸುಮಾರು 10,000 ವಿಶೇಷ ಅತಿಥಿಗಳಿಗೆ ಆಹ್ವಾನ ನೀಡಲಾಗಿದೆ.   

Tags:    

Writer - ವಾರ್ತಾಭಾರತಿ

contributor

Editor - siddik

contributor

Byline - ವಾರ್ತಾಭಾರತಿ

contributor

Similar News