ಮಂಗಳೂರು: ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ
Update: 2023-07-12 10:46 GMT
ಮಂಗಳೂರು,ಜು.12: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು.
ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಕುಮಾರ್ ಅವರು ದ.ಕ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಗಿ ಹಾಗೂ ಪಾಲಿಕೆಯ ಜಂಟಿ ಆಯುಕ್ತ ರಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದಾರೆ.
ಇದುವರೆಗೂ ಅಪರ ಜಿಲ್ಲಾಧಿಕಾರಿಯಾಗಿದ್ದ ಮಾಣಿಕ್ಯ ಅವರು ಸಂತೋಷ್ ಕುಮಾರ್ ಅವರಿಗೆ ಶುಭಹಾರೈಸಿದರು.