ಮಂಗಳೂರು: ಶಸ್ತ್ರಚಿಕಿತ್ಸೆ ವೇಳೆ ಮಹಿಳೆ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ
Update: 2023-07-26 11:58 GMT
ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ನಡೆದ ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರ ನಿರ್ಲಕ್ಷ್ಯದಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆನ್ನಲಾದ ಘಟನೆ ವರದಿಯಾಗಿದೆ.
ಮೃತ ಮಹಿಳೆಯನ್ನು ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ನಿವಾಸಿ ಶಿಲ್ಪಾ ಆಚಾರ್ಯ ಎಂದು ಗುರುತಿಸಲಾಗಿದೆ. ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಘಟನೆಯಿಂದ ಅಸಮಾಧಾನಗೊಂಡಿರುವ ಮಹಿಳೆಯ ಕುಟುಂಬಸ್ಥರು ಮಳೆಯನ್ನು ಲೆಕ್ಕಿಸದೇ ನ್ಯಾಯಕ್ಕಾಗಿ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.