ತಮಿಳುನಾಡು ವಿಮಾನ ನಿಲ್ದಾಣದಲ್ಲಿ 6,500 ಕ್ಕೂ ಹೆಚ್ಚು ಜೀವಂತ ಆಮೆಗಳು ವಶ, ಇಬ್ಬರ ಬಂಧನ

Update: 2023-06-24 05:07 GMT

ತಿರುಚಿರಾಪಳ್ಳಿ (ತಮಿಳುನಾಡು): ಕೌಲಾಲಂಪುರದಿಂದ ತಮಿಳುನಾಡಿನ ತಿರುಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇಬ್ಬರು ವ್ಯಕ್ತಿಗಳನ್ನು ಶುಕ್ರವಾರ ಬಂಧಿಸಿರುವ ಕಸ್ಟಮ್ ಏರ್ ಇಂಟೆಲಿಜೆನ್ಸ್ ಯುನಿಟ್ (ಎಐಯು) ಅಧಿಕಾರಿಗಳು ಅವರಿಂದ 6,850 ಜೀವಂತ ಆಮೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. .

"ನಿರ್ದಿಷ್ಟ ಗುಪ್ತಚರದ ಮಾಹಿತಿ ಮೇರೆಗೆ, ತಿರುಚ್ಚಿಯ AIU ಅಧಿಕಾರಿಗಳು ವಿಮಾನ ನಿಲ್ದಾಣದ ನಿರ್ಗಮನ ಗೇಟ್ ನಲ್ಲಿ ಇಬ್ಬರು ಪ್ರಯಾಣಿಕರನ್ನು ತಡೆದರು. ಅವರ ಚೆಕ್-ಇನ್ ಲಗೇಜ್ ಗಳನ್ನು ಪರಿಶೀಲಿಸಿದಾಗ, ಅಧಿಕಾರಿಗಳು ಪ್ರತಿ ಪ್ರಯಾಣಿಕರ ಸ್ಟ್ರಾಲರ್ ಬ್ಯಾಗ್ ನೊಳಗೆ  ಸಣ್ಣ ಪೆಟ್ಟಿಗೆಗಳಲ್ಲಿ ಸಣ್ಣ ಗಾತ್ರದ ಜೀವಂತ ಆಮೆಗಳನ್ನು ಬಚ್ಚಿಟ್ಟಿರುವುದು ಪತ್ತೆ ಹಚ್ಚಿದ್ದಾರೆ ಎಂದು ಅಧಿಕಾರಿಗಳು ಹೇಳಿದರು.

ಒಬ್ಬ ಪ್ರಯಾಣಿಕರಿಂದ 57,441 ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದರು.

ಕಸ್ಟಮ್ಸ್ ಅಧಿಕಾರಿಗಳ ಪ್ರಕಾರ, ಜೀವಂತ ಕಾಡು ಆಮೆಗಳನ್ನು ಮಾನ್ಯ ಆಮದು ದಾಖಲೆಗಳು ಅಥವಾ ವನ್ಯಜೀವಿಗಳನ್ನು ಭಾರತಕ್ಕೆ ಸಾಗಿಸಲು ಅಗತ್ಯವಿರುವ ಪರವಾನಗಿ ಇಲ್ಲದೆ ಭಾರತಕ್ಕೆ ಅಕ್ರಮವಾಗಿ ಆಮದು ಮಾಡಿಕೊಳ್ಳಲು ಪ್ರಯತ್ನಿಸಲಾಗಿದೆ ಎಂದರು.

ರೆಡ್ ಇಯರ್ಡ್ ಸ್ಲೈಡರ್ ಆಮೆಗಳನ್ನು ಅವುಗಳ ಮೂಲ ದೇಶಕ್ಕೆ ಮರಳಿ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ.

ಅಧಿಕಾರಿಗಳು ಕಸ್ಟಮ್ಸ್ ಆಕ್ಟ್, 1962 ರ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ . ಬಂಧಿತ ಇಬ್ಬರನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು.

Tags:    

Writer - ವಾರ್ತಾಭಾರತಿ

contributor

Editor - Sathish

contributor

Byline - ವಾರ್ತಾಭಾರತಿ

contributor

Similar News