ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

Update: 2023-06-27 10:09 GMT

ಚಿಕ್ಕಮಗಳೂರು: ಮನೆಗೆ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಪಲ್ಟಿಯಾಗಿರುವ ಘಟನೆ ಮೂಡಿಗೆರೆ ತಾಲೂಕು ಚಾರ್ಮಾಡಿ ಘಾಟಿಯ ಆಲೇಖಾನ್ ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಎತ್ತರದ ರಸ್ತೆ ಹಾಗೂ ಮಳೆಯಿಂದ ರಸ್ತೆ ತೇವಗೊಂಡಿದ್ದ ಕಾರಣ ಸಂಚಾರದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಇದ್ದಕ್ಕಿದ್ದಂತೆ ವಾಹನ ಮಗುಚಿದೆ ಘಟನೆಯಲ್ಲಿ ಪಿಕಪ್ ಚಾಲಕ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News