ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತಲೆಮರೆಸಿಕೊಂಡಿರುವ ಆರೋಪಿಗಳು ಶರಣಾಗುವಂತೆ ಎನ್ಐಎ ನ್ಯಾಯಾಲಯ ಆದೇಶ

Update: 2023-06-28 10:22 GMT

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತಲೆಮರೆಸಿಕೊಂಡಿರುವ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆ ಹಾಗೂ ಆಸ್ತಿ ಮುಟ್ಟುಗೋಲು ಮಾಡಲಾಗುವುದೆಂದು ಎನ್ಐಎ ನ್ಯಾಯಾಲಯ ಆದೇಶ ಮಾಡಿರುವ ಬಗ್ಗೆ ವರದಿಯಾಗಿದೆ.

ಈ ಕುರಿತು ಸುಳ್ಯ ನಗರದಲ್ಲಿ ಎನ್ಐಎ ಅಧಿಕಾರಿಗಳು ಧ್ವನಿವರ್ಧಕದ ಮೂಲಕ ಉದ್ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ.

ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಲಾಗುತ್ತಿದೆ. ತಲೆಮರೆಸಿಕೊಂಡಿರುವ ಆರೋಪಿಗಳಾದ ಉಮರ್ ಫಾರೂಕ್ ಹಾಗೂ ಮುಸ್ತಫಾ ಅವರ ಶರಣಾಗತಿಗೆ ಉದ್ಘೋಷಣೆ ಮಾಡಲಾಗುತ್ತಿದ್ದು, ಆರೋಪಿಗಳ ಮನೆಗೆ ಎನ್ಐಎ ಅಧಿಕಾರಿಗಳು ತೆರಳಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿದ್ದಾರೆ.

ಮಂಗಳವಾರ ಬೆಳ್ಳಾರೆಯಲ್ಲಿಯೂ ಧ್ವನಿವರ್ಧಕದ ಮೂಲಕ ಎನ್ಐಎ ನ್ಯಾಯಾಲಯದ ಆದೇಶವನ್ನು ಉದ್ಘೋಷಣೆ ಮಾಡಿ ಆರೋಪಿ ಮನೆಗೆ ಹೋಗಿ ಆದೇಶ ಪ್ರತಿ ಅಂಟಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News