ಮಣಿಪಾಲದಲ್ಲಿ ವೇಶ್ಯಾವಾಟಿಕೆ ದಂಧೆ: ಇಬ್ಬರ ಬಂಧನ, ಐವರು ಯುವತಿಯರ ರಕ್ಷಣೆ

Update: 2023-07-22 07:47 GMT

ಉಡುಪಿ, ಜು.22: ವೇಶ್ಯಾವಾಟಿಕೆಗೆ ಸಂಬಂಧಿಸಿ ಮಪಾಲದ ವಿದ್ಯಾರತ್ನ ನಗರದಲ್ಲಿರುವ ಮನೆಯೊಂದಕ್ಕೆ ಶುಕ್ರವಾರ ರಾತ್ರಿ ದಾಳಿ ನಡೆಸಿದ ಮಣಿಪಾಲ ಪೊಲೀಸರು ಇಬ್ಬರನ್ನು ಬಂಧಿಸಿ, ಐವರು ಯುವತಿಯರನ್ನು ರಕ್ಷಿಸಿರುವ ಬಗ್ಗೆ ವರದಿಯಾಗಿದೆ.

ಬಂಧಿತರನ್ನು ವೇಶ್ಯಾವಾಟಿಕೆ ವ್ಯವಹಾರ ನಡೆಸುತ್ತಿದ್ದ ಅಬ್ದುಲ್ ಸಲಾಮತ್ ಹಾಗೂ ಚಂದ್ರಹಾಸ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಎಸ್ ಪಿ ಅಕ್ಷಯ ಹಾಕೆ ಮಚ್ಚೀಂದ್ರ ಮಾರ್ಗದರ್ಶನದಲ್ಲಿ ದಾಳಿ ಮಾಡಿದ ಪೊಲೀಸರು, ಅಬ್ದುಲ್ ಸಲಾಮತ್ ಹಾಗೂ ಚಂದ್ರಹಾಸ ಎಂಬವರನ್ನು ವಶಕ್ಕೆ ಪಡೆದು, ವೇಶ್ಯಾವಾಟಿಕೆ ವ್ಯವಹಾರ ನಡೆಸಲು ಬಳಸಿಕೊಂಡಿದ್ದ 5 ಮಂದಿ ಮಹಿಳೆಯರನ್ನು ರಕ್ಷಿಸಿದ್ದಾರೆ. ಇವರಲ್ಲಿ ಮೂವರ ಬೆಂಗಳೂರು ಮೂಲದ ನಿವಾಸಿಗಳಾಗಿದ್ದು, ಇನ್ನಿಬ್ಬರು ಮಹಾರಾಷ್ಟ್ರದ ನಾಸಿಕ್ ಹಾಗೂ ಮುಂಬೈ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.

ವೇಶ್ಯಾವಾಟಿಕೆ ವ್ಯವಹಾರಕ್ಕೆ ಬಳಸಿದ 4 ಮೊಬೈಲ್, 1 ಕಾರು, 2 ಬೈಕ್ ಹಾಗೂ 10,000ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅನೈತಿಕ ಚಟುವಡಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಕೊಠಡಿಗಳನ್ನು ಒದಗಿಸಿದ ಪ್ರಮುಖ ಆರೋಪಿ ಖಾಲಿದ್ ಎಂಬಾತ ಸ್ಥಳದಿಂದ ಪರಾರಿ ಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಅದೇ ರೀತಿ ಶಾಂತಿನಗರದ ಮನೆಯ ಮೇಲೆ ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ್ ನೇತೃತ್ವದ ತಂಡ ದಾಳಿ ಮಾಡಿ ಮನೆಯನ್ನು ವೇಶ್ಯಾವಾಟಿಕೆಗೆ ಚಟುವಟಿಕೆಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿ ಮನೆಯನ್ನು ಜಪ್ತಿ ಮಾಡಲಾಗಿದೆ. ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಡುಪಿ ಎಸ್ಪಿ ಅಕ್ಷಯ್ ಮಚ್ಚಿಂದ್ರ ಹಾಕೆ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಟಿ., ಉಡುಪಿ ಡಿವೈಎಸ್ಪಿ ದಿನಕರ ಕೆ.ಪಿ. ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ನಿರೀಕ್ಷಕ ದಿವಾಕರ್ ಹಾಗೂ ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ ಟಿ.ವಿ. ನೇತೃತ್ವದಲ್ಲಿ ಮಣಿಪಾಲ ಎಸ್ಸೈ ಅಬ್ದುಲ್ ಖಾದರ್, ಸಿಬ್ಬಂದಿ ಸುಕುಮಾರ್ ಶೆಟ್ಟಿ, ಇಮ್ರಾನ್, ಸುರೇಶ್ ಕುಮಾರ್, ಜ್ಯೋತಿ ನಾಯಕ್, ಅರುಣ ಅವರನ್ನು ಒಳಗೊಂಡ ತಂಡ ಈ ಕಾರ್ಯಾಚರಣೆಯನ್ನು ನಡೆಸಿದೆ.

 

 

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News