ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರ ಮಧ್ಯಂತರ ಜಾಮೀನು ಜುಲೈ 19 ರವರೆಗೆ ವಿಸ್ತರಿಸಿದ ಸುಪ್ರೀಂ ಕೋರ್ಟ್

Update: 2023-07-05 08:19 GMT

ತೀಸ್ತಾ ಸೆಟಲ್ವಾಡ್, ಫೋಟೋ: PTI 

ಹೊಸದಿಲ್ಲಿ: ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ನೀಡಿರುವ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್  ಜುಲೈ 19 ರ ಮುಂದಿನ ವಿಚಾರಣೆಯವರೆಗೆ ಬುಧವಾರ ವಿಸ್ತರಿಸಿದೆ ಎಂದು NDTV ವರದಿ ಮಾಡಿದೆ.

2002ರ ಗೋಧ್ರಾ ನಂತರದ ಗಲಭೆ ಪ್ರಕರಣಗಳಲ್ಲಿ ನಿರಪರಾಧಿಗಳನ್ನು ಬಂಧಿಸಲು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಪ್ರಕರಣದಲ್ಲಿ ಶರಣಾಗುವಂತೆ ಗುಜರಾತ್ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಸೆಟಲ್ವಾಡ್ ಅವರ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ಸೆಟಲ್ವಾಡ್ ಅವರ ಸಾಮಾನ್ಯ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು.

ಇದಕ್ಕೂಮುನ್ನ ಜುಲೈ 1 ರಂದು ಸುಪ್ರೀಂ ಕೋರ್ಟ್ ಸೆಟಲ್ವಾಡ್ ಗೆ ಬಂಧನದಿಂದ ರಕ್ಷಣೆ ನೀಡಿತ್ತು ಹಾಗೂ ಸದ್ಯಕ್ಕೆ ಹೈಕೋರ್ಟ್ ಆದೇಶವನ್ನು ತಡೆಹಿಡಿದಿದೆ.

ಶನಿವಾರ ತಡರಾತ್ರಿ ಈ ಪ್ರಕರಣದ ವಿಚಾರಣೆ ನಡೆಸಿದ ತ್ರಿಸದಸ್ಯ ಪೀಠವು ಹೈಕೋರ್ಟ್ ಆದೇಶದ ವಿರುದ್ಧ ಪ್ರಶ್ನಿಸಲು ಸಾಮಾಜಿಕ ಹೋರಾಟಗಾರ್ತಿಗೆ ಏಕೆ ಸಮಯ ನಿರಾಕರಿಸಲಾಗಿದೆ ಎಂದು ಪ್ರಶ್ನಿಸಿತ್ತು.

Writer - ವಾರ್ತಾಭಾರತಿ

contributor

Editor - Sathish

contributor

Byline - ವಾರ್ತಾಭಾರತಿ

contributor

Similar News