ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿಗೆ ಸೋಲು; ಮೂವರು ಮುಖಂಡರಿಗೆ ಕೆಪಿಸಿಸಿಯಿಂದ ನೋಟಿಸ್ ಜಾರಿ

Update: 2023-07-06 10:19 GMT

ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ಆಂತರಿಕ ಕಲಹದ ವಿಚಾರ ಇದೀಗ ಬಹಿರಂಗವಾಗಿದ್ದು. ಪಕ್ಷದ ಅಭ್ಯರ್ಥಿಯ ಸೋಲಿಗೆ ನೇರ ಕಾರಣವಾಗಿರುವ ಬಗ್ಗೆ ಬೆಳ್ತಂಗಡಿಯ ಮೂವರು ಕಾಂಗ್ರೆಸ್ ಮುಖಂಡರಿಗೆ ಕೆಪಿಸಿಸಿಯಿಂದ ಅಂತರಿಕ ತನಿಖೆ ನಡೆಸಲು ಖುದ್ದು ಕೆಪಿಸಿಸಿ ಕಚೇರಿಗೆ ಹಾಜರಾಗಲು ನೋಟಿಸ್ ಜಾರಿಯಾಗಿರುವ ಬಗ್ಗೆ ವರದಿಯಾಗಿದೆ.

ಕರ್ನಾಟಕ ವಿಧಾನ ಸಭಾ ಚುನಾವಣೆ 2023 ನಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಪರವಾಗಿ ಬಹಿರಂಗ ಪ್ರಚಾರ ಮಾಡದೆ ಪಕ್ಷದ ವಿರುದ್ಧವೇ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿ ಸೋಲಲು ಕಾರಣರಾಗಿದ್ದೀರಿ ಎಂದು ಕೆಪಿಸಿಸಿ ಕಚೇರಿಗೆ ಲಿಖಿತ ದೂರು ಬಂದಿದ್ದು. ಈ ಬಗ್ಗೆ ವಿವರಣೆ ಪಡೆಯಲು ಕೆಪಿಸಿಸಿ ಉಪಾಧ್ಯಕ್ಷ ಶ್ರೀ ಗಂಗಾಧರ ಗೌಡ, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಂಜನ್ ಗೌಡ, ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶ್ರೀ ಶೈಲೇಶ್ ಕುಮಾರ್ ಇವರಿಗೆ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಶಿಸ್ತು ಕ್ರಮ ಕಮಿಟಿಯ ಅಧ್ಯಕ್ಷ ಕೆ.ರಹಮಾನ್ ಖಾನ್ ಪತ್ರ ತಲುಪಿದ 7 ದಿನದೊಳಗಾಗಿ ಅಂದರೆ ಜುಲೈ 8 ರಂದು ಬೆಂಗಳೂರು ಕೆಪಿಸಿಸಿ ಕಚೇರಿಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದಾರೆ.

ಗಂಗಾಧರ ಗೌಡ , ರಂಜನ್ ಗೌಡ , ಶೈಲೇಶ್ ಕುಮಾರ್ ಈ ಮೂವರು ಮುಖಂಡರಿಗೂ ಕೆಪಿಸಿಸಿ ಯಿಂದ ತನಿಖೆ ನಡೆಸಿ ಪಕ್ಷದಲ್ಲಿ ಇದ್ದುಕೊಂಡು ಪಕ್ಷದ ವಿರೋಧವಾಗಿ ನಡೆದುಕೊಂಡಿರುವ ಬಗ್ಗೆ ಬೆಳ್ತಂಗಡಿಯಿಂದ ದೂರುಗಳು ಹೋಗಿದ್ದ ಹಿನ್ನಲೆಯಲ್ಲಿ ಇದೀಗ ಕೆ.ಪಿ.ಸಿಸಿ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿದು ಬಂದಿದೆ.

 

 

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News