ಛತ್ತೀಸ್ ಗಢ ಉಪ ಮುಖ್ಯಮಂತ್ರಿ ಆಗಿ ಟಿಎಸ್ ಸಿಂಗ್ ದೇವ್ ನೇಮಕ

Update: 2023-06-29 03:31 GMT

ಹೊಸದಿಲ್ಲಿ: ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ರಾಜಕೀಯ ಪ್ರತಿಸ್ಪರ್ಧಿ ಟಿಎಸ್ ಸಿಂಗ್ ದೇವ್ ಅವರನ್ನು ವರ್ಷಾಂತ್ಯದಲ್ಲಿ ನಡೆಯಲಿರುವ ರಾಜ್ಯ ಚುನಾವಣೆಗಳಿಗೆ ಮುಂಚಿತವಾಗಿ ಉಪ ಮುಖ್ಯಮಂತ್ರಿಯನ್ನಾಗಿ ಹೆಸರಿಸಲಾಗಿದೆ. ಈ ಮೂಲಕ ಉನ್ನತ ಹುದ್ದೆಯ ಬದಲಾವಣೆಯ ಊಹಾಪೋಹ ಅಂತ್ಯವಾಗಿದೆ.

ದಿಲ್ಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಂಜೆಯ ನಂತರ ಪಕ್ಷವು ಘೋಷಣೆ ಮಾಡಿದೆ.

"ಐಎನ್ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಛತ್ತೀಸ್ ಗಢದ ಉಪ ಮುಖ್ಯಮಂತ್ರಿಯಾಗಿ ಟಿಎಸ್ ಸಿಂಗ್ ದೇವ್ ಅವರನ್ನು ನೇಮಿಸುವ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ:

"ಸಿಂಗ್ ದೇವ್ ಅವರು ನಿಷ್ಠಾವಂತ ಕಾಂಗ್ರೆಸ್ ನಾಯಕ ಮತ್ತು ಸಮರ್ಥ ಆಡಳಿತಗಾರರಾಗಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ಅವರ ಸೇವೆಯಿಂದ ರಾಜ್ಯಕ್ಕೆ ಹೆಚ್ಚಿನ ಲಾಭವಾಗಲಿದೆ. ಛತ್ತೀಸ್ ಗಢದ ಜನರು ಖರ್ಗೆ ಜಿ ಹಾಗೂ ರಾಹುಲ್ ಗಾಂಧೀಜಿ ನಾಯಕತ್ವದಲ್ಲಿ ಕಾಂಗ್ರೆಸ್ ಅನ್ನು ಭಾರಿ ಬಹುಮತದೊಂದಿಗೆ ಮರು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸ ನಮಗಿದೆ" ಎಂದು ವೇಣುಗೋಪಾಲ್ ಸೇರಿಸಿದರು.

ಕಾಂಗ್ರೆಸ್ ಪಕ್ಷವು ಎರಡನೇ ಅವಧಿಗೆ ಗೆಲ್ಲುವ ಗುರಿ ಹೊಂದಿರುವ ರಾಜ್ಯದಲ್ಲಿ ಗುಂಪುಗಾರಿಕೆಯನ್ನು ಎದುರಿಸುವ ಯೋಜನೆ ಹೊಂದಿದೆ ಎಂದು ಮೂಲಗಳು ಸೂಚಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Sathish

contributor

Byline - ವಾರ್ತಾಭಾರತಿ

contributor

Similar News