ಉಡುಪಿ| ಜೀಪು ಢಿಕ್ಕಿ: ಪಾದಾಚಾರಿ ಮೃತ್ಯು

Update: 2023-06-15 09:02 GMT

ಕೋಟ, ಜೂ.15: ಜೀಪೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜೂ.14ರಂದು ರಾತ್ರಿ 9ಗಂಟೆ ಸುಮಾರಿಗೆ ಸಾಸ್ತಾನದ ಮಧುರಾ ಹೋಟೆಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ರಮೇಶ್ ಎಂದು ಗುರುತಿಸಲಾಗಿದೆ. ಸಾಸ್ತಾನ ಕೋಡಿ ರಸ್ತೆಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಮೇಶ್, ಹೋಟೆಲ್ನಿಂದ ಊಟ ಪಾರ್ಸೆಲ್ ಹಿಡಿದುಕೊಂಡು ರಸ್ತೆ ಬದಿ ನಡೆದು ಕೊಂಡು ಹೋಗುತ್ತಿರುವಾಗ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಜೀಪು ರಮೇಶ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ರಮೇಶ್ ಬ್ರಹ್ಮಾವರ ಆಸ್ಪತ್ರೆಗೆ ಕರೆದು ಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News