ಜಿಯೋ ಲ್ಯಾಪ್‌ಟಾಪ್‌ ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದಂತೆ ಲ್ಯಾಪ್‌ಟಾಪ್‌ಗಳ ಆಮದಿಗೆ ನಿರ್ಬಂಧ ವಿಧಿಸಿದ ಕೇಂದ್ರ; ಇದು ಕಾಕತಾಳಿಯವೇ ಎಂದು ಪ್ರಶ್ನಿಸಿದ ನೆಟ್ಟಿಗರು

Update: 2023-08-04 12:46 GMT

ಹೊಸದಿಲ್ಲಿ: ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು ಮತ್ತು ಕೆಲವು ರೀತಿಯ ಕಂಪ್ಯೂಟರ್‌ಗಳ ಮೇಲಿನ ಆಮದಿನ ಮೇಲೆ ಕೇಂದ್ರ ಸರ್ಕಾರ ವಿಧಿಸಿರುವ ನಿರ್ಬಂಧಗಳ ಬಗ್ಗೆ ಜನರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆಗಳನ್ನು ಕೇಳಲು ಪ್ರಾರಂಭಿಸಿದ್ದಾರೆ.

ಭದ್ರತಾ ಕಾಳಜಿ ಮತ್ತು ದೇಶೀಯ ಉತ್ಪಾದನೆಗೆ ಉತ್ತೇಜನ ನೀಡಲು ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆಯಾದರೂ, ಇದೇ ಸಮಯದಲ್ಲಿ ರಿಲಯನ್ಸ್‌ ಜಿಯೋ ಲ್ಯಾಪ್‌ಟಾಪ್‌ ಮಾರುಕಟ್ಟೆಗೆ ಬಂದಿರುವುದು ನೆಟ್ಟಿಗರ ಅನುಮಾನಗಳಿಗೆ ಕಾರಣವಾಗಿದೆ.

ರಿಲಯನ್ಸ್ ಜಿಯೋ ತನ್ನ JioBook ಲ್ಯಾಪ್‌ಟಾಪ್ ಅನ್ನು ದೇಶದಲ್ಲಿ ಬಿಡುಗಡೆ ಮಾಡಿದ ಕೆಲವು ದಿನಗಳಲ್ಲಿ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿರುವ ಬಗ್ಗೆ ಜನರು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದ್ದಾರೆ.

"ಆಗಸ್ಟ್. 1 ರಂದು Jio ತಮ್ಮ ಲ್ಯಾಪ್‌ಟಾಪ್ 'Jiobook' ಅನ್ನು 16,499 ಕ್ಕೆ ಬಿಡುಗಡೆ ಮಾಡಿದೆ. ಆಗಸ್ಟ್. 3 ರಂದು ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು ಮತ್ತು ಕಂಪ್ಯೂಟರ್‌ಗಳ ಆಮದನ್ನು ಸರ್ಕಾರ ನಿರ್ಬಂಧಿಸಿದೆ. ಇದು ಕಾಕತಾಳಿಯವೇ?" ಎಂದು ಹಲವು ಮಂದಿ ಪ್ರಶ್ನಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News