ತುಮಕೂರು: ಆರ್‌ಟಿಒ ಬ್ರೋಕರ್ ಮನೆ ಮೇಲೆ ಲೋಕಾಯುಕ್ತ ದಾಳಿ

Update: 2025-01-08 06:42 GMT

ತುಮಕೂರು: ದಿಬ್ಬೂರಿನಲ್ಲಿರುವ ಆರ್‌ಟಿಒ ಬ್ರೋಕರ್ ಸತೀಶ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ಸತೀಶ್ ನಿವೃತ್ತ ಆರ್‌ಟಿಒ ಅಧಿಕಾರಿ ರಾಜು ಅವರ ಆಪ್ತ ಎನ್ನಲಾಗಿದ್ದು, ಬೆಂಗಳೂರಿನಲ್ಲಿರುವ ರಾಜು ಅವರ ಮನೆ ಮೇಲೆ ದಾಳಿ ನಡೆದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

ಲೋಕಾಯುಕ್ತ ಎಸ್ಪಿ ಲಕ್ಷ್ಮೀನಾರಾಯಣ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸುಮಾರು ಎಂಟು ಜನ ಅಧಿಕಾರಿಗಳ ತಂಡ ಮನೆಯಲ್ಲಿ ಹಲವು ದಾಖಲೆಗಳ ಹುಡುಕಾಟ ನಡೆಸಿವೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News