ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ : ಡ್ರೋನ್ ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Update: 2024-12-16 08:53 GMT
ತುಮಕೂರು : ರೈತರೊಬ್ಬರ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಸೋಡಿಯಂ ಎಸೆದು ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ ಡಿ.26ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.
ಮಧುಗಿರಿ ತಾಲ್ಲೂಕಿನ ಇಟಕದಿಬ್ಬನಹಳ್ಳಿ ಹೋಬಳಿಯ ಜನಕಲೋಟಿ ಗ್ರಾಮದ ರೈತರೊಬ್ಬರ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಡ್ರೋನ್ ಪ್ರತಾಪ್ ಇತ್ತೀಚೆಗೆ ಪ್ರಯೋಗಾರ್ಥವಾಗಿ ಸೋಡಿಯಂ ಬಳಸಿ ಸ್ಪೋಟಿಸಿ ಅದನ್ನು ಯೂಟ್ಯೂಬ್‌ನಲ್ಲಿ ಅಪ್ ಲೋಡ್ ಮಾಡಿದ್ದ. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಇದನ್ನು ಆದರಿಸಿ ಎಫ್ಐಆರ್ ದಾಖಲಿಸಿಕೊಂಡಿದ್ದ ಮಿಡಿಗೇಶಿ ಪೊಲೀಸರು ಡ್ರೋನ್ ಪ್ರತಾಪ್ ಅವರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು.