ದೇವರಾಯನದುರ್ಗ ಜಾತ್ರೆ ಹಿನ್ನಲೆ : ಮದ್ಯ ಮಾರಾಟ ನಿಷೇಧ
Update: 2025-03-12 13:17 IST

ತುಮಕೂರು : ತುಮಕೂರು ತಾಲೂಕು ಊರ್ಡಿಗೆರೆ ಹೋಬಳಿ ದೇವರಾಯನದುರ್ಗ ಗ್ರಾಮದಲ್ಲಿ ಮಾ.6 ರಿಂದ 18ರವರೆಗೆ ನಡೆಯಲಿರುವ ಶ್ರೀಲಕ್ಷ್ಮಿ ನರಸಿಂಹ ಸ್ವಾಮಿ ಜಾತ್ರೆ ಪ್ರಯುಕ್ತ ಮಾ.13ರಂದು ಬ್ರಹ್ಮರಥೋತ್ಸವ ಜರುಗಲಿದೆ. ಜಾತ್ರೆ ಸಂದರ್ಭದಲ್ಲಿ ಯಾವುದೇ ತರಹದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಶ್ರೀಕ್ಷೇತ್ರದ 5 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.
ನಿಷೇಧಾದೇಶವು ಮಾ.12ರ ಸಂಜೆ 6 ರಿಂದ ಮಾ.14ರ ಸಂಜೆ 6 ಗಂಟೆವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಎಲ್ಲ ತರಹದ ಮದ್ಯದಂಗಡಿಗಳನ್ನು ಮುಚ್ಚಬೇಕೆಂದು ಅವರು ಸೂಚಿಸಿದ್ದಾರೆ.