ಕುಣಿಗಲ್ | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಮಹಿಳೆ ಮೃತ್ಯು, ನಾಲ್ವರಿಗೆ ಗಾಯ
Update: 2025-02-17 12:28 IST

ತುಮಕೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಓರ್ವ ಮಹಿಳೆ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಕುಣಿಗಲ್ ತಾಲೂಕಿನ ಕಂಪ್ಲಾಪುರ ಗ್ರಾಮದಲ್ಲಿ ಇಂದು(ಫೆ.17) ಘಟನೆ ನಡೆದಿದೆ.
ಮೃತ ಮಹಿಳೆಯನ್ನು ಬಾದಾಮಿ ತಾಲೂಕಿನ ಗುಳೇದಗುಡ್ಡ ಮೂಲದ ಮಹಿಳೆ ಕಸ್ತೂರಿ (43) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಸವರಾಜು, ಶಾಂತಮ್ಮ, ವಿಶ್ವನಾಥ್, ಪಾವನಿಗೆ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕುಣಿಗಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಸಂಬಂಧ ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.