ಬಿಗ್‌ಬಾಸ್‌ ಖ್ಯಾತಿಯ ಡ್ರೋನ್ ಪ್ರತಾಪ್ ಬಂಧನ

Update: 2024-12-12 18:07 GMT

 ಡ್ರೋನ್ ಪ್ರತಾಪ್​

ತುಮಕೂರು : ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್​ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕೃಷಿ ಹೊಂಡದಲ್ಲಿ ಸೋಡಿಯಂ ಹಾಕಿ, ಡ್ರೋಣ್ ಪ್ರತಾಪ್ ಸ್ಫೋಟಿಸಿದ್ದರು. ಹಾಗು, ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು.

ಈ ಕುರಿತು ತುಮಕೂರಿನ ಮಧುಗಿರಿಯ ಮಿಡಿಗೇಶಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಮಿಡಿಗೇಶಿ ಠಾಣೆ ಪೊಲೀಸರು ಪ್ರತಾಪ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News