ತುಮಕೂರು | ದೂರುದಾರ ಮಹಿಳೆಯೊಂದಿಗೆ ಅಸಭ್ಯ ವರ್ತನೆ: ಡಿವೈಎಸ್‌ಪಿ ರಾಮಚಂದ್ರಪ್ಪ ಬಂಧನ
Update: 2025-01-03 16:30 GMT
ತುಮಕೂರು : ಭೂಮಿಯ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದಿದ್ದ ಮಹಿಳೆ ಜೊತೆ ಅಸಭ್ಯ ವರ್ತನೆ ತೋರಿದ್ದ ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ.
ಜಮೀನು ವ್ಯಾಜ್ಯದ ವಿಚಾರಕ್ಕೆ ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದು, ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಅಮಾನತು ಮಾಡಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶಿಸಿದ್ದರು. ಇದರ ಬೆನ್ನಲ್ಲೇ ಇದೀಗ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ
ಮಹಿಳೆ ನೀಡಿದ ದೂರಿನ ಮೇರೆಗೆ ಭಾರತೀಯ ನಾಗರಿಕ ಸಂಹಿತೆ ಕಲಂ 68,75,79 ಅತ್ಯಾಚಾರ ಕೇಸ್ ಅಡಿಯಲ್ಲಿ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ದೂರಿನ ಮೇರೆಗೆ ಇದೀಗ ಮಧುಗಿರಿ ಪೊಲೀಸರು ಆರೋಪಿ ಡಿವೈಎಸ್ ಪಿ ರಾಮಚಂದ್ರಪ್ಪನನ್ನು ಬಂಧಿಸಿದ್ದಾರೆ.