ತಿಪಟೂರು | ತೋಟದಲ್ಲಿ ಹಸುಗಳನ್ನು ಮೇಯಿಸಲು ಹೋದ ರೈತ ವಿದ್ಯುತ್ ತಂತಿ ಸ್ಪರ್ಶಿಸಿ ಮೃತ್ಯು
Update: 2025-04-29 17:29 IST

ತಿಪಟೂರು : ಹಸುಗಳನ್ನು ತೋಟದಲ್ಲಿ ಮೇಯಿಸಲು ಹೋದ ರೈತ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ತುಮಕೂರಿನ ತಿಪಟೂರು ತಾಲೂಕಿನ ಕಲ್ಲಯ್ಯನ ಪಾಳ್ಯ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಚಿಕ್ಕಕೊಟ್ಟಿಗೆಹಳ್ಳಿ ನಿವಾಸಿ ಯೋಗೇಶ್ (55) ಎಂದು ಗುರುತಿಸಲಾಗಿದೆ.
ಎಂದಿನಂತೆ ಹಸುಗಳನ್ನು ಮೇಯಿಸಲು ರೈತ ಯೋಗೇಶ್, ತೋಟಕ್ಕೆ ಹೋಗಿದ್ದಾರೆ. ಆದರೆ, ರಾತ್ರಿ ಮಳೆಗಾಳಿಯಿಂದ ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ಆಕಸ್ಮಿಕವಾಗಿ ಹಸುಗಳು ಹಾಗೂ ಯೋಗೇಶ್ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ತಿಪಟೂರು ಗ್ರಾಮಾಂತರ ಠಾಣೆ ಸಬ್ ಇನ್ಪೆಕ್ಟರ್ ನಾಗರಾಜು, ಬೆಸ್ಕಾಂ ಇಲಾಖೆ ಎಇಇ ಮನೋಹರ್ ಸೇರಿದಂತೆ ಕಂದಾಯ ಇಲಾಖೆ, ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.