ತಿಪಟೂರು: ಚಿರತೆಯ ಬಾಲ ಹಿಡಿದು ಅರಣ್ಯ ಇಲಾಖೆ ಬಲೆಗೆ ಕೆಡವಿದ ಯುವಕ

Update: 2025-01-07 15:22 GMT

ತಿಪಟೂರು: ತಿಪಟೂರು ತಾಲೂಕಿನ ಕಸಬಾ ಹೋಬಳಿ ಕೆರೆಗೋಡಿ ರಂಗಾಪುರ ಬಳಿ ಹಲವಾರು ದಿನಗಳಿಂದ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ ಚಿರತೆಯನ್ನು ಸಾರ್ವಜನಿಕರ ನೆರವಿನೊಂದಿಗೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ತಿಪಟೂರು ತಾಲೂಕಿನ ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬವರ ತೋಟದಲ್ಲಿ ಬೀಡುಬಿಟ್ಟಿದ ಸುಮಾರು 5 ವರ್ಷ ಪ್ರಾಯದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಬಲೆಬೀಸಲಾಗಿತ್ತು. ಆದರೆ ಸಾರ್ವಜನಿಕರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯನ್ನು ರಂಗಾಪುರ ಗ್ರಾಮದ ಆನಂದ್ ಎಂಬ ಯುವಕ ಚಿರತೆ ಬಾಲ ಹಿಡಿದು ಅರಣ್ಯ ಇಲಾಖೆ ಬಲೆಗೆ ಕೆಡವಿದ್ದು, ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಚಿರತೆ ಹಿಡಿದ್ದು, ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.

ತುಮಕೂರು ಉಪ ಅರಣ್ಯಸಂರಕ್ಷಣಾಧಿಕಾರಿ ಅನುಪಮ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭರತ್ ಡಿ.ವಲಯ ಅರಣ್ಯಾಧಿಕಾರಿ ಕೆ.ಎಲ್ ಮಧು‌.ಉಪ ಅರಣ್ಯಾಧಿಕಾರಿ ಪ್ರದೀಪ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News