ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ: ಒಂದೇ ಕುಟುಂಬದ ಮೂವರು ಮೃತ್ಯು

Update: 2023-10-02 09:29 GMT

ತುಮಕೂರು, ಅ.2: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ.

ಮೃತರನ್ನು ಮಧುಗಿರಿ ತಾಲೂಕಿನ ವೀರೇನಹಳ್ಳಿ ತಾಂಡದ ಅನಿತಾ ಬಾಯಿ, ಪವನ್ ಮತ್ತು ಬಾಲಾಜಿ ಎಂದು ಗುರುತಿಸಲಾಗಿದೆ.

ಲಾರಿ ಚಾಲಕ ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ವಾರ್ತಾಭಾರತಿ ಓದುಗರಿಗೆ ಶುಭಸುದ್ದಿ: ನಿಮ್ಮ ನೆಚ್ಚಿನ VB ಈಗ ವಾಟ್ಸ್ ಆ್ಯಪ್ ಚಾನೆಲ್ ನಲ್ಲೂ ಲಭ್ಯ

https://whatsapp.com/channel/0029VaA8ju86LwHn9OQpEq28  ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News