ಅಸಭ್ಯ ವರ್ತನೆ ಪ್ರಕರಣ : ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ
Update: 2025-01-04 13:40 GMT
ಮಧುಗಿರಿ : ಭೂಮಿಯ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದಿದ್ದ ಮಹಿಳೆ ಜೊತೆ ಅಸಭ್ಯ ವರ್ತನೆ ತೋರಿದ್ದ ಆರೋಪದಡಿ ಬಂಧಿತರಾಗಿದ್ದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಜೆಎಂಎಫ್‍ಸಿ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅಸಭ್ಯ ವರ್ತನೆ ತೋರಿದ್ದ ವಿಡಿಯೊ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ಬಳಿಕ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು. ನಂತರ ಮಧುಗಿರಿ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದರು. ಶುಕ್ರವಾರ ರಾತ್ರಿ ಬಂಧಿಸಿದ್ದ ಪೊಲೀಸರು ಶನಿವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.