ದೂರುದಾರ ಮಹಿಳೆಯೊಂದಿಗೆ ಅಸಭ್ಯ ವರ್ತನೆ | ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅಮಾನತು
Update: 2025-01-03 14:21 GMT
ತುಮಕೂರು : ಜಮೀನು ವ್ಯಾಜ್ಯದ ಕುರಿತು ದೂರು ನೀಡಲು ಬಂದ ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ ಡಿವೈಎಸ್‍ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದೆ.
ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಗೆ ಡಿವೈಎಸ್‍ಪಿ ತಮ್ಮ ಕಚೇರಿಯಲ್ಲೇ ಅಸಭ್ಯ ವರ್ತನೆ ತೋರಿದ್ದಾರೆ ಎನ್ನಲಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಡಿವೈಎಸ್‍ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಇಂದು ಡಿಜಿ ಆದೇಶ ಹೊರಡಿಸಿದ್ದಾರೆ.