NDRF ಪರಿಹಾರ ಭಿಕ್ಷೆಯಲ್ಲ, ಅದು ನಮ್ಮ ಪಾಲಿನ ಹಕ್ಕು : ಸಚಿವ ಕೆ.ಎನ್.ರಾಜಣ್ಣ

Update: 2024-03-26 14:14 GMT

ತುಮಕೂರು: ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಪರಿಹಾರ ಕೇಳುತ್ತಿರುವುದು ಭಿಕ್ಷೆಯಲ್ಲ. ಅದು ನಮ್ಮ ಪಾಲಿನ ಹಕ್ಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, "ಕೇಂದ್ರದಲ್ಲಿರುವ ಬಿಜೆಪಿ ಸರಕಾರ ಒಕ್ಕೂಟ ವ್ಯವಸ್ಥೆಯ ನಿಯಮಗಳನ್ನು ಬದಿಗೊತ್ತಿ, ಮಲತಾಯಿ ಧೋರಣೆ ಅನುಸರಿಸುತ್ತಿದೆ. ಈ ಅನ್ಯಾಯ ಸರಿಹೋಗಬೇಕೆಂದರೆ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ತೊಲಗಿಸಬೇಕು" ಎಂದರು.

ಕೇಂದ್ರದ ಮಲತಾಯಿ ಧೋರಣೆಯನ್ನು ವಿರೋಧಿಸಿ ಕಳೆದ 75 ವರ್ಷಗಳ ಇತಿಹಾಸದಲ್ಲಿ, ಸಂವಿದಾನದ ಆರ್ಟಿಕಲ್ 32ರ ಅಡಿಯಲ್ಲಿ ಸುಪ್ರಿಂಕೋರ್ಟ್ ಮೆಟ್ಟಿಲೇರಿರೋದು ಇದೇ ಮೊದಲು. ದೇಶದ ಒಕ್ಕೂಟ ವ್ಯವಸ್ಥೆ ಅಪಾಯದಂಚಿಗೆ ಸಾಗುತ್ತಿದೆ. ಹಾಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಸ್.ಪಿ.ಮುದ್ದಹನನುಮೇಗೌಡರನ್ನು ಗೆಲ್ಲಿಸಬೇಕು. ನಮ್ಮ ಸರಕಾರದ ಐದು ಗ್ಯಾರಂಟಿ ಜಾರಿ ಮಾಡಿದೆ. ಗ್ಯಾರಂಟಿ ಜಾರಿ ಮಾಡೋದಿಕ್ಕೆ ಆಗಲ್ಲ ಎಂದು ದೂರುತ್ತಿದ್ದವರು, ನಮ್ಮದನ್ನೇ ಕಾಪಿ ಮಾಡಿ, ಮೋದಿ ಗ್ಯಾರಂಟಿ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಮಾತನಾಡಿ, ನಾನು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಯಾಗಿದ್ದೇನೆ. ಮೂರುಬಾರಿ ಶಾಸಕನಾಗಿ, 10 ವರ್ಷಗಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿ, ಒಂದು ಬಾರಿ ಸಂಸದನಾಗಿ ಕೆಲಸ ಮಾಡಿರುವ ಕಾರಣ ಜಿಲ್ಲೆಯ ಭೌಗೋಳಿಕ ಚಿತ್ರಣ ಅರಿತಿದಿದ್ದೇನೆ. ಜಿಲ್ಲೆಯಲ್ಲಿ 10 ತಾಲೂಕುಗಳಲ್ಲಿಯೂ 10 ರೀತಿಯ ಸಮಸ್ಯೆ ಇದೆ. ಒಂದಕ್ಕೊಂದು ಭಿನ್ನವಾಗಿವೆ. ಶೇಂಗಾ ಬೆಳೆ, ಕೊಬ್ಬರಿ, ರಾಗಿ, ಚಿರತೆ, ಕರಡಿ ಸಮಸ್ಯೆಯಿದೆ. ಹೀಗಾಗಿ ವಿವಿಧ ಭಾಗಗಳಲ್ಲಿರುವ ಸಮಸ್ಯೆಗಳ ಬಗ್ಗೆ ಅರಿತು ಕೆಲಸ ಮಾಡಲು ಸಾಧ್ಯವಾಗಿದ್ದು, ಮುಂದಿನ ದಿನಗಳಲ್ಲಿಯೂ ಸಹ ಜಿಲ್ಲೆಯ ಅಭ್ಯುದಯಕ್ಕೆ ಕೆಲಸ ಮಾಡುತ್ತೇನೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News