ನೇಹಾ ಕೊಲೆ ಪ್ರಕರಣ | ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

Update: 2024-04-19 14:12 IST
ನೇಹಾ ಕೊಲೆ ಪ್ರಕರಣ |  ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?
  • whatsapp icon

ತುಮಕೂರು: ಹುಬ್ಬ‍ಳ್ಳಿಯ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಕೊಲೆಯಾದ ನೇಹಾ ಮತ್ತು ಆರೋಪಿ ಫಯಾಝ್​ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಝ್ ​ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಆರೋಪಿ​​ ಕೊಲೆ ಮಾಡಿದ್ದಾನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

ಇಂದು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಘಟನೆಯ ವೇಳೆ ಮಗಳ ಜೊತೆ ಇದ್ದ, ತಾಯಿ ಮೇಲೂ ಹಲ್ಲೆ ಮಾಡಲಾಗಿದೆ, ಆದರೆ ನೇಹಾ ತಾಯಿಯನ್ನು ರಕ್ಷಣೆ ಮಾಡಲಾಗಿದೆ" ಎಂದು ತಿಳಿಸಿದರು.

ಇದರಲ್ಲಿ ಲವ್ ಜಿಹಾದ್ ಕಂಡು ಬಂದಿಲ್ಲ. ತನ್ನನ್ನು ಬಿಟ್ಟು ಬೇರೆಯವನ್ನು ಮದುವೆ ಮಾಡಿಕೊಳ್ಳುವೆಯಾ ಎಂದು ಕೂಪದಲ್ಲಿ ಕೊಲೆ ಮಾಡಿದ್ದಾನೆ. ಇಂಥಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News