ತುಮಕೂರು | ಮಾಗಡಿಗೆ ಹೇಮಾವತಿ ನಾಲೆ ನೀರು ; ಯೋಜನೆ ವಿರುದ್ಧ ಪ್ರತಿಭಟನೆ

Update: 2024-05-16 17:07 GMT

ತುಮಕೂರು : ಜಿಲ್ಲೆಯ ಕುಡಿಯುವ ನೀರಿನ ಜೀವನಾಡಿಯಾಗಿರುವ ಹೇಮಾವತಿ ನಾಲೆಗೆ ಪ್ರತ್ಯೇಕ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಮೂಲಕ ಮಾಗಡಿಗೆ ನೀರು ಕೊಂಡೊಯ್ಯಲು ಕೈಗೊಂಡಿರುವ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಗುಬ್ಬಿ ತಾಲೂಕಿನ ಡಿ.ರಾಂಪುರದ ಹೇಮಾವತಿ ಶಾಖಾ ನಾಲೆ ಬಳಿ ಮಾಜಿ ಸಚಿವ ಸೊಗಡು ಶಿವಣ್ಣ ನೇತೃತ್ವದಲ್ಲಿ ನೂರಾರು ರೈತರು,ವಿವಿಧ ಮಠಾಧೀಶರು,ವಿವಿಧ ರಾಜಕೀಯ ಪಕ್ಷಗಳ ನಾಯಕರು,ವಿವಿಧ ಸಂಘಟನೆಗಳ ಕಾರ್ಯಕರ್ತರು ಪಕ್ಷಾತೀತವಾಗಿ ಸಾಂಕೇತಿಕವಾಗಿ ನಾಲೆಗೆ ಮೂರು ಹಿಡಿ ಮಣ್ಣು ಹಾಕುವ ಮೂಲಕ ಪ್ರತಿಭಟನೆ ನಡೆಸಿದರು.

ಮಾಜಿ ಸಚಿವರಾದ ಸೊಗಡು ಶಿವಣ್ಣ, ಶಾಸಕರಾದ ಎಂ.ಟಿ.ಕೃಷ್ಣಪ್ಪ,ಸುರೇಶ್‍ಗೌಡ,ಜ್ಯೋತಿಗಣೇಶ್,ಮಾಜಿ ಶಾಸಕರಾದ ಮಸಾಲೆ ಜಯರಾಮ್, ಎಚ್.ನಿಂಗಪ್ಪ,ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜಿನಪ್ಪ ಸೇರಿದಂತೆ ಇನ್ನಿತರೆ ಮುಖಂಡರ ನೇತೃತ್ವದಲ್ಲಿ ಹೇಮಾವತಿ ಶಾಖಾ ನಾಲೆಯ 70ನೇ ಕಿ.ಮೀ.ಸ್ಥಳವಾದ ಡಿ.ರಾಂಪುರದ ಬಳಿ ತುರುವೇಕೆರೆ, ತಿಪಟೂರು, ಗುಬ್ಬಿ, ತುಮಕೂರು ಗ್ರಾಮಾಂತರ, ತುಮಕೂರು ನಗರದ ನೂರಾರು ಸಂಖ್ಯೆಯಲ್ಲಿ ರೈತರು, ಹೋರಾಟಗಾರರು ಜಮಾಯಿಸಿ ಪ್ರತಿಭಟಿಸಿ ಕಾಮಗಾರಿ ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ನಮ್ಮ ನೀರು, ನಮ್ಮ ಹಕ್ಕು ಹೋರಾಟದ ಕುರಿತು ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ,ಪೈಪ್‍ಲೈನ್ ಮೂಲಕ ಮಾಗಡಿ,ರಾಮನಗರಕ್ಕೆ (843.71 ಎಂಸಿಎಫ್‍ಟಿ) ನೀರು ತೆಗೆದುಕೊಂಡು ಹೋಗುವುದರಿಂದ ಜಿಲ್ಲೆಯ ಜನರಿಗೆ ತೀವ್ರ ಅನ್ಯಾಯವಾಗುತ್ತದೆ. ಇಲ್ಲಿನ ಜನರಿಗೆ ಕುಡಿಯುವ ನೀರು ಸಿಗದಂತಾಗುತ್ತದೆ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಹೇಮಾವತಿ ನೀರನ್ನು ತೆಗೆದುಕೊಂಡು ಹೋಗಲು ಬಿಡುವುದಿಲ್ಲ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News